ಮೈಸೂರು: ಕೆ.ಆರ್.ಆಸ್ಪತ್ರೆಯಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಇಂದು ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ್ದಾರೆ.
ಬಳಿಕ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಹೆಚ್ಚು ಸಿಸಿ ಕ್ಯಾಮರಾಗಳು ಹಾಗೂ ಭದ್ರತಾ ಸಿಬ್ಬಂದಿಯ ಅವಶ್ಯಕತೆ ಇದೆ. ಮೂರು ಪಾಳಿಯಲ್ಲಿ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲು, ಹೆಚ್ಚು ಸಿಸಿ ಕ್ಯಾಮರಾ ಅಳವಡಿಸಲು ಕೂಡಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸದ್ಯ ಆ ಮಹಿಳೆಗೆ ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ರೋಗಿಗಳಿಗೆ ಹಳೆಯ ಜಯದೇವ ಆಸ್ಪತ್ರೆಯ ಕಟ್ಟಡದಲ್ಲಿ ಚಿಕಿತ್ಸೆ ನೀಡುತ್ತಿದ್ದ ಕಾರಣ ಅಲ್ಲಿದ್ದ ರೋಗಿಗಳನ್ನೆಲ್ಲಾ ಸ್ಥಳಾಂತರ ಮಾಡಲಾಗಿತ್ತು. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಡೀನ್ ಡಾ.ಸಿ.ಪಿ.ನಂಜರಾಜ್, ವೈದ್ಯಕೀಯ ಅಧೀಕ್ಷಕ ನಂಜುಂಡಸ್ವಾಮಿ ಹಾಗೂ ಇತರ ವೈದ್ಯರು ಇದ್ದರು.