Friday, November 1, 2024
NEWSನಮ್ಮರಾಜ್ಯರಾಜಕೀಯ

ಕರ್ನಾಟಕದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ತಾವರ್ ಚಂದ್ ಗೆಹ್ಲೋಟ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ 19ನೇ ರಾಜ್ಯಪಾಲರಾಗಿ ಭಾನುವಾರ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಹೈಕೋರ್ಟ್ ಮುಖ್ಯ ನ್ಯಾ. ಅಭಯ್ ಶ್ರೀನಿವಾಸ್ ಓಕಾ ಬೋಧಿಸಿದರು. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ರಾಜ್ಯಪಾಲರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುಷ್ಪಗುಚ್ಛ ನೀಡಿ ಸ್ವಾಗತಿಸಿದ್ದಾರೆ.

ನಾನು ಶ್ರದ್ಧಾಪೂರ್ವಕವಾಗಿ ಕರ್ನಾಟಕ ರಾಜ್ಯಪಾಲ ಹುದ್ದೆಯ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆಂದು ಭರವಸೆ ಕೊಡುತ್ತೇನೆ. ವಿಧಿಬದ್ಧ ನಿಯಮಗಳ ಪಾಲನೆ ಮೂಲಕ ಸಂವಿಧಾನದ ರಕ್ಷಣೆ ಮಾಡಲು ಬದ್ಧನಾಗಿರುತ್ತೇನೆ. ಕರ್ನಾಟಕ ರಾಜ್ಯದ ಜನರ ಸೇವೆ ಮತ್ತು ಕಲ್ಯಾಣ ಕಾರ್ಯಗಳಲ್ಲಿ ನಿರತನಾಗಿರುತ್ತೇನೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ನೂತನ ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಕೆಲ ಸಚಿವರು ಭಾಗಿಯಾಗಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಪದಗ್ರಹಣ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

2014ರಿಂದ ಗುಜರಾತ್ ಮೂಲದ ವಜೂಭಾಯ್ ರೂಢಾಭಾಯ್‌ ವಾಲಾ ರಾಜ್ಯಪಾಲರಾಗಿದ್ದರು. ಕಳೆದ ವಾರ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನರ್‍ರಚನೆ ವೇಳೆ ತಾವರ್‌ ಚಂದ್ ಗೆಹ್ಲೋಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಅವರು ರಾಜೀನಾಂಎ ನೀಡುವ ಮುನ್ನವೇ ಅವರನ್ನು ರಾಜ್ಯದ ರಾಜ್ಯಪಾಲರೆಂದು ತಿಳಿಸಲಾಗಿತ್ತು. ರಾಜ್ಯಸಭೆಯಲ್ಲಿ ಆಡಳಿತ ಪಕ್ಷದ ನಾಯಕರಾಗಿದ್ದ ಗೆಹ್ಲೋಟ್ ನಿಯಮದ ಪ್ರಕಾರ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

2006ರಿಂದ 2014ರವರೆಗೆ ಗೆಹ್ಲೋಟ್ ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. 1996ರಿಂದ 2009ರವರೆಗೆ ಮಧ್ಯಪ್ರದೇಶದ ಸಹಜಪುರ್ ಕ್ಷೇತ್ರದ ಲೋಕಸಭಾ ಸಂಸದರಾಗಿದ್ದ ಗೆಹ್ಲೋಟ್ 2009ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ರಾಜ್ಯಸಭೆಗೆ ಆಯ್ಕೆ ಆಗಿದ್ದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...