NEWSನಮ್ಮರಾಜ್ಯರಾಜಕೀಯ

ರಾಜ್ಯ ಸರ್ಕಾರವೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿ: ಸಿದ್ದರಾಮಯ್ಯ ವಾಗ್ದಾಳಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಸ್ವತಃ ರಾಜ್ಯ ಸರ್ಕಾರವೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾದ ಪರಿಣಾಮ ಮಂಡ್ಯ ಸಂಸದೆ ಸುಮಲತಾ ಅವರ ಆರೋಪಕ್ಕೆ ಸರ್ಕಾರದಿಂದ ಉತ್ತರವಿಲ್ಲ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಧ್ವನಿ ಎತ್ತಿದ್ದಾರೆ. ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂದು ಆರೋಪ ಮಾಡಿದ್ದಾರೆ. ಅವರು ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆ ಆದರೂ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು ಎಂದು ಆದರೆ ಅದನ್ನು ಮಾಡದೆ ಕಣ್ಣುಮುಚ್ಚಿಕುಳಿತಿದೆ ಎಂದು ಕಿಡಿಕಾರಿದರು.

ಇನ್ನು ಕೆಆರ್‌ಎಸ್ ಸುತ್ತಮುತ್ತಲಿನ 20 ಕೀಲೋ ಮೀಟರ್ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಜೆಡಿಎಸ್ ನಾಯಕರ ಗಣಿ ಕಂಪನಿಗಳು ಇವೆ ಅಂತಾ ಆರೋಪ ಮಾಡಿದ್ದಾರೆ. ಆದರೆ, ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಕುಮಾರಸ್ವಾಮಿ ಅವರ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ಎಚ್‌ಡಿಕೆ ವಿರುದ್ಧವೂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚೀಕೆ ಏನೂ ಇಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಯನ್ನು ವರ್ಗಾವಣೆ ಮಾಡೋಕೆ 16 ಕೋಟಿ ರೂ. ಡೀಲಿಂಗ್ ಮಾಡಿದ್ದು ಸುಳ್ಳಾ ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದರು.

ಭ್ರಷ್ಟಾಚಾರ ಮಾಡೋಕೆ ಸರ್ಕಾರಕ್ಕೆ ಕೋವಿಡ್ ಹೆಸರಿನಲ್ಲಿಅನೂಕೂಲವಾಗಿದೆ. ಕೋವಿಡ್ ಸಂದರ್ಭದಲ್ಲಿ ವಿಪಕ್ಷಗಳು ಸಹ ಪ್ರತಿಭಟನೆ ಮಾಡೋಕೆ ಬರಲ್ಲ ಅನ್ನೋದು ಗೊತ್ತಿದೆ. ಹೀಗಾಗಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆದು ಎರಡೂವರೆ ವರ್ಷ ಆಯ್ತು. ಅದರ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದರೂ ಆ ಕುರಿತು ಸದನದಲ್ಲಿ ಚರ್ಚೆ ಆಗುತ್ತಿಲ್ಲ. ಚರ್ಚೆ ಮಾಡಿದರೆ ಸಾಮಾಜಿಕ ನ್ಯಾಯ ಒದಗಿಸಬೇಕಾಗುತ್ತದೆ. ಹೀಗಾಗಿ ಆ ಬಗ್ಗೆ ಚರ್ಚೆ ಮಾಡುತ್ತಿಲ್ಲವೆಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ತಮ್ಮ ಮಧ್ಯದಲ್ಲಿ ಯಾವುದೇ ಬಣಗಳಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಸಹ ಇಲ್ಲ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ