NEWSದೇಶ-ವಿದೇಶನಮ್ಮರಾಜ್ಯ

ಕಾಲಮಿತಿಯೊಳಗೆ ಜಲಜೀವನ್ ಮಿಷನ್ ಪೂರ್ಣಗೊಳಿಸಿ: ಕೇಂದ್ರ ಸಚಿವ ಶೇಖಾವತ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಲಜೀವನ್ ಮಿಷನ್ ಯೋಜನೆ ಮೂಲಕ 2024ರ ವೇಳೆಗೆ ದೇಶದ 18.93 ಕೋಟಿ ಗ್ರಾಮೀಣ ಮನೆಗಳ್ಲಲಿ 15.70 ಕೋಟಿ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲಿಸಿ ಮಾತನಾಡಿದರು. ಕರ್ನಾಟಕದ ಜಲಜೀವನ್ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೇ ಪೂರ್ಣಗೊಳಿಸಿ ಎಂದು ಸಚಿವರು ಸಲಹೆ ನೀಡಿದರು.

ಜಲಜೀವನ್ ಯೋಜನೆಯಡಿ ಕೇವಲ ಸೌಲಭ್ಯ ಕಲ್ಪಿಸುವುದು ಮಾತ್ರವಲ್ಲ, ನಿರಂತರವಾಗಿ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆ. ಅಂತೆಯೇ ರಾಜ್ಯದಲ್ಲಿ ಆದ್ಯತಾ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕ್ರಿಯಾತ್ಮಕ ನಳ ಸಂಪರ್ಕಗಳನ್ನು ಆದ್ಯತೆಯ ಮೇರೆಗೆ ಒದಗಿಸಬೇಕು. ನಳ ಸಂಪರ್ಕ ನೀಡುವುದರೊಂದಿಗೆ ಪೂರೈಸುವ ನೀರಿನ ಗುಣಮಟ್ಟವನ್ನೂ ಖಾತರಿ ಪಡಿಸುವಂತೆ ಸಲಹೆ ನೀಡಿದರು.

ರಾಜ್ಯದಲ್ಲಿ ಯೋಜನೆಯ ಪ್ರಗತಿಯ ಕುರಿತು ಮಾಹಿತಿ ನೀಡಿದ ಸಿಎಂ ಬಿಎಸ್‌ವೈ, ಆದ್ಯತಾ ಜಿಲ್ಲೆಗಳಾದ ರಾಯಚೂರು ಜಿಲ್ಲೆಗೆ 2000 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಯೋಜನೆ ರೂಪಿಸಲಾಗಿದ್ದು ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಯಾದಗಿರಿ ಜಿಲ್ಲೆಯಲ್ಲಿಯೂ ಬಹುಗ್ರಾಮ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಇನ್ನು ರಾಜ್ಯದ 91.19 ಲಕ್ಷ ಗ್ರಾಮೀಣ ಕುಟುಂಬಗಳಿಗೆ ತಲಾ 55 ಎಲ್‌ಪಿಸಿಡಿ ಶುದ್ಧ ನೀರು ಒದಗಿಸುವ ಗುರಿ ಇದೆ. ಈ ಯೋಜನೆಯಡಿ 2021-22 ನೆ ಆರ್ಥಿಕ ವರ್ಷದಲ್ಲಿ 25.17 ಲಕ್ಷ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸಲು ಉದ್ದೇಶಿಸಲಾಗಿದೆ. 2022-23 ರಲ್ಲಿ 27.15 ಲಕ್ಷ ಹಾಗೂ 2023 ಡಿಸೆಂಬರ್ ಅಂತ್ಯದ ವೇಳೆಗೆ 10.72 ಲಕ್ಷ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ