ಬೆಂಗಳೂರು: ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ರಾಜ್ಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇಂಧನ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜು.12ರಂದು ರಕ್ಷಾ ರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸೈಕಲ್ ಜಾಥಾ ಹಮ್ಮಿಕೊಂಡಿದ್ದರು. ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಯುವ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತ್ತು.
ಕೊರೊನಾ ನಿಯಮ ಪಾಲನೆ ಮಾಡಿಲ್ಲ. ಜತೆಗೆ ಯಾವುದೇ ಅನುಮತಿ ಪಡೆಯದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಲಾಕ್ಡೌನ್ ನಿಯಮಗಳನ್ನು ಉಲ್ಲಂಘಟನೆ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.