Vijayapatha – ವಿಜಯಪಥ
Saturday, November 2, 2024
NEWSದೇಶ-ವಿದೇಶರಾಜಕೀಯ

ಎರಡು ಮಕ್ಕಳಿಗಿಂತ ಹೆಚ್ಚಿದ್ದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವಂತ್ತಿಲ್ಲ !

ಒಂದು ಬೇಕು ಎರಡು ಸಾಕು: ಸಿಎಂ ಆದಿತ್ಯನಾಥ್ ನೀತಿಗೆ ವ್ಯಾಪಕ ಟೀಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಲಕ್ನೋ: ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕರಡು ಮಸೂದೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದೆ. ಅದು ಈಗ ವ್ಯಾಪಕ ಟೀಕೆ, ಖಂಡನೆಗೆ ಗುರಿಯಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಪ್ರಸ್ತಾವಿತ ಮಸೂದೆ ಪ್ರಕಾರ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ನಿರ್ಬಂಧಿಸಲಿದೆ. ಅಷ್ಟೇ ಅಲ್ಲ, ಸರ್ಕಾರಿ ಕೆಲಸಕ್ಕೆ ಅರ್ಜಿ ಸಲ್ಲಿಸುವುದರಿಂದ ಅಥವಾ ಯಾವುದೇ ರೀತಿಯ ಸಬ್ಸಿಡಿ ಪಡೆಯುವುದರಿಂದಲೂ ನಿರ್ಬಂಧಿಸುತ್ತದೆ. ಜತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿಗೂ ಕುಂದುಂಟಾಗಲಿದೆ.

ಇದಲ್ಲದೆ ರಾಜ್ಯದಲ್ಲಿನ ಪ್ರತಿ ಸಾವಿರ ಜನಸಂಖ್ಯೆಗೆ ಜನನ ಪ್ರಮಾಣವನ್ನು ತಗ್ಗಿಸುವ ಮೂಲಕ 2030ರ ವೇಳೆಗೆ ಜನಸಂಖ್ಯಾ ನಿಯಂತ್ರಣದ ಗುರಿ ಹೊಂದಲಾಗಿದೆ. ಜನಸಂಖ್ಯಾ ಸ್ಥಿರತೆ ಜತೆಗೆ ತಾಯ್ತನ ವೇಳೆ ಹಾಗೂ ಶಿಶು ಸಾವುಗಳ ಸಂಖ್ಯೆಯನ್ನು ತಗ್ಗಿಸುವುದು, ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವುದು ಮುಂತಾದ ಗುರಿಗಳನ್ನು ಹೊಂದಲಾಗಿದೆ.

ಈ ಜನಸಂಖ್ಯಾ ನೀತಿಯು ಮುಸ್ಲಿಂ ಜನಸಂಖ್ಯೆಯನ್ನು ನಿಯಂತ್ರಿಸುವುದಕ್ಕಾಗಿ ರೂಪಿಸಿರುವ ತಂತ್ರ ಎಂದು ವಿಪಕ್ಷಗಳು ಆರೋಪಿಸಿವೆ. ಒಂದು ನಿರ್ದಿಷ್ಟ ಕೋಮಿಗಾಗಿ ಕೆಲವು ನೀತಿಗಳನ್ನು ರೂಪಿಸಲಾಗಿದೆ ಎಂದು ವಾಗ್ದಾಳಿ ನಡೆಸಿವೆ.

ಇನ್ನು ಉತ್ತರ ಪ್ರದೇಶ ಸರ್ಕಾರದಲ್ಲಿ ಇರುವ ಬಿಜೆಪಿ ಶಾಸಕರಲ್ಲಿ ಬಹುತೇಕರು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ. ಉದಾ: ತಿಲ್ಹಾರದ ಬಿಜೆಪಿ ಶಾಸಕ ರೋಷನ್ ಲಾಲ್ ವರ್ಮಾ ಅವರು ಮೂವರು ಪುತ್ರರು ಮತ್ತು ಐವರು ಪುತ್ರಿಯರು ಸೇರಿ ಒಟ್ಟು ಎಂಟು ಮಕ್ಕಳನ್ನು ಹೊಂದಿದ್ದರೆ, ನಾನ್ಪರ ಶಾಸಕಿ ಮಾಧುರಿ ವರ್ಮಾ ಅವರು ಏಳು ಮಕ್ಕಳನ್ನು ಹೆತ್ತಿದ್ದಾರೆ. ಅವರಲ್ಲಿ ಆರು ಪುತ್ರಿಯರು. ಇನ್ನು ಎಂಟು ಶಾಸಕರು ತಲಾ ಆರು ಮಕ್ಕಳನ್ನು, 16 ಶಾಸಕರು ಐವರು ಮಕ್ಕಳನ್ನು ಹೊಂದಿದ್ದಾರೆ.

ಅಂತೆಯೇ 45 ಶಾಸಕರಿಗೆ ನಾಲ್ಕು ಮಕ್ಕಳಿದ್ದರೆ, ಸುಮಾರು 87 ಶಾಸಕರು ಮೂವರು ಮಕ್ಕಳನ್ನು ಹೊಂದಿದ್ದಾರೆ. ಸುಮಾರು 103 ಶಾಸಕರಿಗೆ ಇಬ್ಬರು ಮಕ್ಕಳಿದ್ದರೆ, 33 ಶಾಸಕರು ಮಾತ್ರ ಒಂದೇ ಮಗುವಿನ ನೀತಿ ಅಳವಡಿಸಿಕೊಂಡಿದ್ದಾರೆ.

ಹಿಂದೂಗಳೇ ಅಧಿಕ: ಮಾಧ್ಯಮವೊಂದರ ವರದಿ ಪ್ರಕಾರ, ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಲ್ಲಿ ಶೇ.83ರಷ್ಟು ಮಂದಿ ಹಿಂದೂಗಳೇ ಇದ್ದಾರೆ. ಶೇ.13ರಷ್ಟು ಮಂದಿ ಮಾತ್ರ ಮುಸ್ಲಿಮರಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ