NEWSನಮ್ಮರಾಜ್ಯಸಿನಿಪಥ

ನಟ ದರ್ಶನ್ ಕಾರ್ಮಿಕರಿಗೆ ಬೈದಿದ್ದಾರೆ ಅಷ್ಟೇ: ಸಂದೇಶ್ ನಾಗರಾಜ್ ಅವರ ಪುತ್ರ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಣ್ಣದಾಗಿ ಗಲಾಟೆ ನಡೆದಿದ್ದು ನಿಜ, ಆದರೆ ನಟ ದರ್ಶನ್ ಯಾರಿಗೂ ಹೊಡೆದಿಲ್ಲ. ನಮ್ಮ ಕಾರ್ಮಿಕರಿಗೆ ಬೈದಿದ್ದಾರೆ ಅಷ್ಟೇ ಎಂದು ಸಂದೇಶ್ ದಿ ಪ್ರಿನ್ಸ್ ಮಾಲೀಕ ಸಂದೇಶ್ ನಾಗರಾಜ್ ಅವರ ಪುತ್ರ ಸ್ಪಷ್ಟಪಡಿಸಿದ್ದಾರೆ.

ಹೋಟೇಲಿನಲ್ಲಿ ವೇಟರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಣ್ಣ ಜಗಳ ಆಗಿದ್ದು ನಿಜ, ಆದರೆ ಹೊಡೆದಿಲ್ಲ ಬೈದಿದ್ದಾರೆ ಅಷ್ಟೆ.

ಅಂದು ನಾನು ಕೂಡ ಇದ್ದೆ. ಬೈಬೇಡಪ್ಪ ನಮ್ಮ ಕಾರ್ಮಿಕರಿಗೆ. ನಮಗೆ ಕೆಲಸಗಾರರು ಸಿಗುವುದಿಲ್ಲ. ನೀನು ಯಾವುದೋ ಟೆನ್ಶನ್ ನಲ್ಲಿ ನಮ್ಮವರಿಗೆ ಯಾಕೆ ಬೈತೀಯಾ ಎಂದಿದ್ದೆ. ಅದಕ್ಕೆ ಅವನು ಕೋಪ ಕೂಡ ಮಾಡಿಕೊಂಡಿದ್ದ ಎಂದರು.

ನಾವು ಶೂಟಿಂಗ್ ನಲ್ಲೂ ಜಗಳ ಆಡುತ್ತೇವೆ. ನಾನು ತಪ್ಪು ಮಾಡಿದಾಗ ಅವನು ಹೇಳುತ್ತಾನೆ, ಅವನು ತಪ್ಪು ಮಾಡಿದಾಗ ನಾನು ಹೇಳ್ತೇನೆ. ಫ್ರೆಂಡ್ ಶಿಪ್ ನಲ್ಲಿ ಇದೆಲ್ಲ ಮಾಮೂಲಿ. ಆದರೆ ಗಲಾಟೆ ಸಂಬಂಧ ತೋಟದಲ್ಲಿ ಏನೇನು ಆಗಿದೆ ಎಂದು ಗೊತ್ತಿಲ್ಲ. ನನ್ನ ಕಾರ್ಮಿಕರಿಗೆ ಏನಾದರೂ ಆದರೆ ನಾನು ಬಿಡ್ತೀನಾ ಎಂದು ಪ್ರಶ್ನಿಸಿದರು.

ಈ ಘಟನೆ ನಡೆದು ಒಂದು ತಿಂಗಳು ಕಳೆದಿದೆ. ಈ ಬಗ್ಗೆ ನಮ್ಮ ತಂದೆಯವರಿಗೆ ಏನೂ ಗೊತ್ತಿಲ್ಲ. ಹೋಟೆಲ್ ನಡೆಸುತ್ತಿರುವುದು ನಾನು, ಹೀಗಾಗಿ ಅವರಿಗೂ ಈ ಘಟನೆಗೂ ಸಂಬಂಧವಿಲ್ಲ ಎಂದರು.

 

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...