NEWSನಮ್ಮರಾಜ್ಯರಾಜಕೀಯ

ನಳಿನ್ ಕುಮಾರ್ ಕಟೀಲ್ ಪಬ್ಲಿಕ್ ಡಿಬೇಟ್‌ಗೆ ಬರಲಿ: ಪಂಥಾಹ್ವಾನ ನೀಡಿದ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಜನರಿಗೆ ವಂಚನೆ ಮಾಡಿದ್ದಾರೆಯೋ ಇಲ್ಲವೋ ಎಂಬುದರ ಬಗ್ಗೆ ಚರ್ಚಿಸಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಬ್ಲಿಕ್ ಡಿಬೇಟ್‌ಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಂಥಾಹ್ವಾನ ನೀಡಿದ್ದಾರೆ.

ದಾವಣಗೆರೆಗೆ ತೆರಳುವ ಮಾರ್ಗ ಮಧ್ಯೆ ಉಪಾಹಾರ ಸೇವಿಸಲು ಚಿತ್ರದುರ್ಗದ ಖಾಸಗಿ ಹೋಟೆಲ್‌ಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನುಡಿದಂತೆ ನಡೆದಿದ್ದಾರೆ. ಕೊಟ್ಟ ಮಾತು ತಪ್ಪಿಲ್ಲ. ಬಸವ ಜಯಂತಿ ದಿನ ಪ್ರಮಾಣ ವಚನ ಸ್ವೀಕರಿಸಿದ ಅವರು, ವಿಧಾನಸೌಧ ಪ್ರವೇಶ ಮಾಡಿ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳ ಪೈಕಿ ಶೇ.99ರಷ್ಟು ಕೆಲಸ ಮಾಡಿದ್ದಾರೆ. ಈ ಬಗ್ಗೆ ನಳಿನ್ ಕಟೀಲ್ ಬೇಕಿದ್ದರೆ ನೇರ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಇನ್ನು ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಬಂಡು ಸರ್ಕಾರ ಎಂದು ಕಿಡಿಕಾರಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಈಗಾಗಲೇ ಕಾಂಗ್ರೆಸ್ ಧರಣಿ ನಡೆಸಿ ಪ್ರತಿಭಟಿಸಿದರೂ ಕೇಂದ್ರ ಬಿಜೆಪಿ ಸರ್ಕಾರ ತನ್ನ ಧೋರಣೆ ನೀತಿಯನ್ನೇ ಅನುಸರಿಸಿದೆ ಎಂದು ಆರೋಪಿಸಿದರು.

ರಾಷ್ಟ್ರೀಯ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ದಿನೇದಿನೆ ಹೆಚ್ಚಾಗುತ್ತಿರುವ ಇಂಧನ ದರ ಏರಿಕೆ ವಿರುದ್ಧ ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ನಲ್ಲಿ ಮ್ಯಾಜಿಕ್ ಚೇರ್ ಆಟ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಕಾಂಗ್ರೆಸ್ ನಲ್ಲಿ ಮ್ಯಾಜಿಕ್ ಚೇರ್ ಆಟ ನಡೆಯುತ್ತಿದೆಯೋ ಅಥವಾ ಬೇರೆ ಯಾವುದೋ?  ಅದಕ್ಕೂ ಮೊದಲು ಬಿಜೆಪಿಯಲ್ಲಿ ನಡೆಯುತ್ತಿದೆಯಲ್ಲ ಅದು ಯಾವ ಚೇರ್ ಆಟ? ಎಂಬುದನ್ನು ಕಟೀಲ್ ತಿಳಿಸಬೇಕು ಎಂದು ಲೇವಡಿ ಮಾಡಿದರು.

ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಧ್ರುವನಾರಾಯಣ್, ಶಾಸಕ ಟಿ.ರಘು ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ ತಾಜ್ ಪೀರ್, ಹನುಮಲಿ ಷಣ್ಮುಖಪ್ಪ, ಜಿ.ಎಸ್.ಮಂಜುನಾಥ್ ಇತರರು ಇದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ