Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಶೀಘ್ರದಲ್ಲೇ ಸಿಹಿಸುದ್ದಿ: ಸಚಿವ ಲಕ್ಷ್ಮಣ ಸವದಿ ಭರವಸೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಸಮಸ್ಯೆಯನ್ನು ಶೀಘ್ರ ಬಗೆಹರಿಸುತ್ತೇವೆ ಈ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವರೂ ಆದ ಲಕ್ಷ್ಮಣ ಸವದಿ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?
ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು

ಬುಧವಾರ ಸಚಿವರ ನಿವಾಸ ಜಯಮಹಲ್‌ನಲ್ಲಿ ಸಚಿವ ಲಕ್ಷ್ಮಣ ಸವದಿ ಅವರನ್ನು ಭೇಟಿಯಾದ ಕೂಟದ ಪದಾಧಿಕಾರಿಗಳು ನೌಕರರ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಪದಾಧಿಕಾರಿಗಳ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿ, ಎಲ್ಲ ನೌಕರರ ಸಮಸ್ಯೆ ಬಗ್ಗೆ ನಮಗೆ ಅರಿವಿದೆ. ಆದ್ದರಿಂದ ಅತೀಶೀಘ್ರದಲ್ಲೇ ಈ ಎಲ್ಲವನ್ನು ಪರಿಹರಿಸೋಣ ಎಂದು ಹೇಳಿದ್ದಾರೆ.

ಇನ್ನು ಈ ಸಂಬಂಧ ನಿನ್ನೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಫೋನ್‌ ಕರೆಯನ್ನೂ ಮಾಡಿ ಚರ್ಚಿಸಿದ ಸಚಿವರು ನೌಕರರ ಬೇಡಿಕೆಗಳು ಒಳಗೊಂಡಂತೆ ಉಳಿದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ತಮ್ಮ ನೇತೃತ್ವದಲ್ಲಿ ಜುಲೈ 16ರಂದು (ನಾಳೆ) ಸಂಜೆ 4ಗಂಟೆಗೆ ನಾಲ್ಕೂ ನಿಗಮದ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನೊಳಗೊಂಡ  ಹಿರಿಯ ಅಧಿಕಾರಿಗಳ ಸಭೆ ನಡೆಸಿ ಒಂದು ನಿರ್ಧಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.

ಹೀಗಾಗಿ ಅತೀಶೀಘ್ರದಲ್ಲೇ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ನೌಕರರಿಗೂ ಸಿಹಿ ಸುದ್ದಿ ಕೊಡಲಾಗುವುದು ಎಂಬ ಭರಸವೆಯನ್ನು ಸಚಿವರು ನೀಡಿದ್ದು, ನಮಗೂ ಒಳ್ಳೆ ತೀರ್ಮಾನ ತೆಗದುಕೊಳ್ಳುವ ವಿಶ್ವಾಸವಿದೆ ಎಂದು ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ಕೂಟದ ಅಧ್ಯಕ್ಷ ಚಂದ್ರಶೇಖರ್‌, ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಖಜಾಂಚಿ ಸತೀಶ್‌,  ಮಹಿಳಾ ಅಧ್ಯಕ್ಷೆ ಚಂಪಕವತಿ, ಉಪಾಧ್ಯಕ್ಷ ಸುಧಾಕರ ರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್‌.ಕೆ.ಯೋಗೇಶ್‌ ಸೇರಿದಂತೆ ಪದಾಧಿಕಾರಿಗಳು ಇದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ