NEWSನಮ್ಮರಾಜ್ಯರಾಜಕೀಯ

ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ : ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೆಗಾಸಿಸ್ ಗೂಢಾಚರ್ಯೆಯಲ್ಲಿ‌ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂಥ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು.

ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ ಎಂದು ತಿಳಿಸಿದ್ದಾರೆ.

ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣುಕದು ಎಂಬುದಕ್ಕೆ ಖಚಿತತೆ ಇದೆಯೇ?

ಅಂತ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ. ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ