NEWSನಮ್ಮರಾಜ್ಯರಾಜಕೀಯ

ಸರ್ಕಾರ ಹೋದರೆ ಹೋದಲಿ, ಜನಾದೇಶ ಪಡೆಯೋಣ: ವಿಶ್ವನಾಥ್‌ ಅಚ್ಚರಿಯ ಹೇಳಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸರ್ಕಾರ ಹೋದರೆ ಹೋಗಲಿ, ಹೊಸದಾಗಿ ಜನಾದೇಶ ಪಡೆಯೋಣ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಮುಖ್ಯಮಂತ್ರಿ ಬದಲಾವಣೆ ಸಂಬಂಧ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಬುಧವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು ‘ಯಡಿಯೂರಪ್ಪ ನಿರ್ಗಮನದಿಂದ ಸರ್ಕಾರ ಮುಂದುವರಿಯಲು ಸಾಧ್ಯವೇ?’ ಎಂಬ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ಹೋದರೆ ಹೋಗಲಿ, ಹೊಸದಾಗಿ ಜನಾದೇಶ ಪಡೆಯೋಣ ಎಂದು ತಿಳಿಸಿದರು.

ಈ ಹಿಂದೆ ಎರಡು ಬಾರಿ ನಿಮಗೆ ಸರಿಯಾದ ನಿರ್ಗಮನ ಆಗಲಿಲ್ಲ. ಈ ಬಾರಿಯೂ ಅದೇ ರೀತಿ ಮಾಡಿಕೊಳ್ಳಬೇಡಿ. ಗೌರವಯುತವಾಗಿ ನೀವು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿ. ಮಠಾಧೀಶರು ಕೂಡ ಇದಕ್ಕೆ ಅಡ್ಡಗಾಲು ಹಾಕಬಾರದು ಎಂದು ಸಲಹೆ ನೀಡಿದರು.

ಇನ್ನು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬಿಜೆಪಿಯ ಮುಂದಿನ ಭವಿಷ್ಯದ ದೃಷ್ಟಿಯಿಂದ, ಸಂಧ್ಯಾ ಕಾಲದಲ್ಲಿರುವ ಯಡಿಯೂರಪ್ಪ ಅವರ ಹಿತದೃಷ್ಟಿಯಿಂದ ಗೌರವಯುತವಾಗಿ ನಿರ್ಗಮಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಅದನ್ನು ಪಾಲಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.

ಮುಂದೆ ಬಾಂಬೆ ಟೀಮಿನ ಯಾರೊಬ್ಬರಿಗೂ ಸೂಕ್ತ ಸ್ಥಾನಮಾನ ಕೊಡಬೇಡಿ. ಇದುವರೆಗಿನ ಅವರ ಸಾಧನೆ ಶೂನ್ಯ. ಕೊಟ್ಟ ಕೆಲಸವನ್ನಿ ನಿಭಾಹಿಸಲು ಸಾಧಯವಾಗದವರು ಮುಂದೆ ಮಾಡುವುದೇನಿದೆ. ಹೀಗಾಗಿ ಅವರಿಗೆ ಯಾವುದೇ ಸ್ಥಾನಮಾನ ಕೊಡಬೇಡಿ ಎಂದು ಇದೇ ವೇಳೆ ಹೈ ಕಮಾಂಡ್‌ಗೆ ಮನವಿ ಮಾಡಿದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ