CrimeNEWSನಮ್ಮಜಿಲ್ಲೆ

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಮೇಲೆ ತೀವ್ರ ಹಲ್ಲೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕ್ಷುಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಡ್ರ್ಯಾಗರ್‌ನಿಂದ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.

ಲಿಂಗಾಬುದಿ ಪಾಳ್ಯ ನಿವಾಸಿ ಭಾಸ್ಕರ್ (30) ಹಲ್ಲೆಗೊಳಾಗದ ವ್ಯಕ್ತಿ. ಅದೇ ಗ್ರಾಮದ ನಿವಾಸಿ ಆನಂದ ಎಂಬುವನು ಡ್ರ್ಯಾಗರನಿಂದ ಮನಸೋ ಇಚ್ಛೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಸಣ್ಣಪುಟ್ಟ ವಿಚಾರಕ್ಕೆ ಇಬ್ಬರ ನಡುವೆ ಸೋಮವಾರ ಗಲಾಟೆಯಾಗಿತ್ತು, ಇದೇ ದ್ವೇಷದಿಂದ ಮಂಗಳವಾರ ರಿಂಗ್ ರಸ್ತೆಯಲ್ಲಿ ಹೋಗುತ್ತಿದ್ದ ಭಾಸ್ಕರ್ ಮೇಲೆ ಆನಂದ್ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ರಸ್ತೆಯಲ್ಲಿ ರಕ್ತದ ಮಡುವಿನಿನಲ್ಲಿ ಬಿದ್ದಿದ್ದ ಭಾಸ್ಕರ್‌ನನ್ನು ದಾರಿಹೋಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿದು ಕುವೆಂಪುನಗರ ಪೊಲೀಸ್ ಇನ್ಸ್ಪೆಕ್ಟರ್ ರಾಜು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಹಲ್ಲೆ ನಡೆದಿರುವ ಸ್ಥಳದಲ್ಲಿ ಈ ಹಿಂದೆ ಅತ್ಯಾಚಾರ, ಸರಗಳ್ಳತನ ಸೇರಿದಂತೆ ಹಲವು ಅಪರಾಧ ಪ್ರಕರಣಗಳು ನಡೆದಿದ್ದವು ಎಂಬುದು ಗಮನಾರ್ಹ. ಪೊಲೀಸರು ಘಟನೆ ನಡೆದಾಗ ಮಾತ್ರ ಗಸ್ತು ತಿರುಗುತ್ತಾರೆ. ಆಮೇಲೆ ಈ ಕಡೆ ತಿರುಗಿಯೂ ನೋಡುವುದಿಲ್ಲ ಎಂದು ಆರೋಪ ಕೇಳಿ ಬಂದಿದೆ. ಇನ್ನು ಈ ಬಗ್ಗೆ ಪೊಲೀಸ್ ಆಯುಕ್ತರು ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?