CrimeNEWSನಮ್ಮಜಿಲ್ಲೆ

ದಂಪತಿ ನಡುವೆ ವಿರಸ ಪತಿ ಆತ್ಮಹತ್ಯೆಗೆ ಶರಣು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮನೆಯವರ ವಿರೋಧವನ್ನೂ ಲೆಕ್ಕಿಸದೇ ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಡುವೆ ವಿರಸವುಂಟಾಗಿ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎನ್‌.ಆರ್‌.ಮೊಹಲ್ಲಾದಲ್ಲಿ ನಡೆದಿದೆ.

ಶಕ್ತಿನಗರದ ನಿವಾಸಿ ಮೊಹಮದ್ ವಾಸಿಂ (24) ಆತ್ಮಹತ್ಯೆ ಮಾಡಿಕೊಂಡವರು. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಮೊಹಮದ್ ವಾಸಿಂ ಮೂರು ವರ್ಷಗಳ ಹಿಂದೆ ಶಾಂತಿನಗರದ ಶಬಾನಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ಮನೆಯವರ ವಿರೋಧದ ಕಾರಣ ಎನ್.ಆರ್.ವೃತ್ತದಲ್ಲಿ ಪ್ರತ್ಯೇಕವಾಗಿ ಸಂಸಾರ ನಡೆಸುತ್ತಿದ್ದರು.

ಕುಡಿತದ ಚಟಕ್ಕೆ ದಾಸನಾಗಿದ್ದ ವಾಸಿಂ ಆಗಾಗ ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ವಿಚಾರದಲ್ಲಿ ದಂಪತಿ ನಡುವೆ ವಿರಸ ಮೂಡಿತ್ತು. ಅಲ್ಲದೇ, ಲಾಕ್‌ಡೌನ್‌ ಸಂದರ್ಭದಲ್ಲಿ ಆದಾಯವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿ ಮನನೊಂದು ತನ್ನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...