NEWSನಮ್ಮಜಿಲ್ಲೆರಾಜಕೀಯ

ಬಿಎಸ್ ವೈ ಬೆಂಬಲಿಸಿ ಜೇವರ್ಗಿಯಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಹುನ್ನಾರವನ್ನು ಖಂಡಿಸಿ ಇಂದು ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ವೀರಶೈವ ಸಮಾಜದ ವತಿಯಿಂದ ಪ್ರತಿಭಟನಾ ಮೆರವಣಿಗೆ ಮಾಡಿ ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಮಾಜದ ಅಧ್ಯಕ್ಷ ಸಿದ್ದು ಅಂಗಡಿ, ಕೇಂದ್ರ ಬಿಜೆಪಿ ನಾಯಕರು ಒಂದು ವೇಳೆ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಮುಂದಿನ ಬಾರಿ ಮತ್ತೇ ಅಧಿಕಾರಕ್ಕೆ ಬರೋದಿಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ಅವರು ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿ ರಾಜ್ಯದಲ್ಲಿ ಈ ಮಟ್ಟಕ್ಕೆ ಬೆಳೆಸಿ ಅಧಿಕಾರಕ್ಕೆ ತಂದಿದ್ದಾರೆ.

ಆದರೆ ಕೆಲವರು ಅವರ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ ಆದ್ದರಿಂದ ಕೂಡಲೇ ವರಿಷ್ಠರು ಮಧ್ಯ ಪ್ರವೇಶಿಸಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲವೆಂದು ರಾಜ್ಯದ ಜನರಿಗೆ ಸ್ಪಷ್ಟಪಡಿಸುವಂತೆ ಆಗ್ರಹಿಸಿದರು.

ತಾಲೂಕು ಸಮಾಜದ ಗೌರವಾಧ್ಯಕ್ಷ ಗುರುಲಿಂಗಯ್ಯ ಹಿರೇಮಠ ಮತ್ತು ಉಪಾಧ್ಯಕ್ಷರಾದ ಭಗವಂತರಾಯ ಶಿವಣ್ಣವರ, ಸಂಗೂ ಹೂಗಾರ, ಕಾನೂನು ಸಲಹೆಗಾರ ಶಾಂತರಾಜ ಪಾಟೀಲ, ಪ್ರಧಾನ ಕಾರ್ಯದರ್ಶಿ ಅಶೋಕ ಪಾಟೀಲ ಕಾರ್ಯದರ್ಶಿ ಅನೀಲ ರಾಂಪೂರ, ಭಗವಂತರಾಯ ನೆಂಗಾ,ಅಶೋಕ ದಿವಾನಿ.

ವಿಶ್ವ ಪಾಟೀಲ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ, ಮಾಧ್ಯಮ ಸಲಹೆಗಾರ ವಿಜಯಕುಮಾರ ಪಾಟೀಲ, ಸಾಹೇಬಗೌಡ ಪಾಟೀಲ, ಪದಾಧಿಕಾರಿಗಳಾದ ಕೇದಾರಲಿಂಗಯ್ಯ ಹಿರೇಮಠ, ಸಿದ್ದು ಚಿನಗುಡಿ.ವಿಶಾಲ ಬಂಕೂರ, ಸಿದ್ದು ಸಾಹು ಗೋಗಿ, ಸಿದ್ದು ಸ್ಥಾವರಮಠ, ವಿಶ್ವರಾದ್ಯ ಗದ್ದಗಿ, ವೀರೂ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...