NEWSನಮ್ಮರಾಜ್ಯರಾಜಕೀಯ

ನಾಳಿದ್ದು ರಾಜೀನಾಮೆ ನೀಡ್ತಾರಂತೆ ಆದ್ರೆ ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿ ರೂ. ಯೋಜನೆಗೆ ಅನುಮತಿ ನೀಡುತ್ತಿದ್ದಾರೆ : ಮಾಜಿ ಸಿಎಂ ಆತಂಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ನಾಳಿದ್ದು ರಾಜೀನಾಮೆ ನೀಡ್ತಾರಂತೆ ಆದ್ರೆ ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿ ರೂ. ಯೋಜನೆಗೆ ಅನುಮತಿ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳಿದ್ದು ರಾಜೀನಾಮೆ ನೀಡ್ತಾರೆ ಎನ್ನುತ್ತಿದ್ದಾರೆ, ಅದೇನೋ ನನಗೆ ಗೊತ್ತಿಲ್ಲ. ಆದ್ರೆ ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿ ರೂ.ಗಳ ಯೋಜನೆಗೆ ಅನುಮತಿ ನೀಡ್ತಿದ್ದಾರೆ.

ನಿರಾವರಿ ಇಲಾಖೆಯ 4 ನಿಗಮಗಳಲ್ಲಿ 12 ಸಾವಿರ ಕೋಟಿ ರೂ. ಯೋಜನೆಗೆ ಇವತ್ತಿನ ಸಭೆಯಲ್ಲಿ ಯಡಿಯೂರಪ್ಪ ಅನುಮತಿ ನೀಡ್ತಿದ್ದಾರೆ. 12ಸಾವಿರ ಕೋಟಿ ಯೋಜನೆಯಲ್ಲಿ ಕಾವೇರಿ ನಿಗಮಕ್ಕೆ ಕೇವಲ 1ಸಾವಿರ ಕೋಟಿ ರೂ. ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಹಳೇ ಕರ್ನಾಟಕ ಭಾಗದಿಂದ ಹೋಗುತ್ತಿದೆ.

ನನಗೆ ಹಳೇ ಕರ್ನಾಟಕ ಹೊಸ ಕರ್ನಾಟಕದ ಪ್ರಶ್ನೆ ಅಲ್ಲ. ಆ ಭಾಗಕ್ಕೆ ನೀಡುವ ಆದ್ಯತೆಯನ್ನ ಈ ಭಾಗಕ್ಕೂ ನೀಡಿ. ಇಲ್ಲಿನ ಜ‌ನ ನಿಮಗೇನು ದ್ರೋಹ ಮಾಡಿದ್ದಾರೆ? ಈ ಭಾಗಕ್ಕೆ 1ಸಾವಿರ ಕೋಟಿ ರೂ. ಆ ಭಾಗಕ್ಕೆ 11ಸಾವಿರ ಕೋಟಿ ರೂ.ಯೋಜನೆ.

ನಿಜವಾಗಲೂ ಆ ಭಾಗದ ಜನರಿಗೆ ನೀರು ಕೊಡಲು ಯೋಜನೆ ರೂಪಿಸಿದ್ದೀರಾ? ದುಡ್ಡು ಹೊಡೆಯುವ ಯೋಜನೆ ನಿಮ್ಮದು. 2 ದಿನದಲ್ಲಿ ಸಿಎಂ‌ ಬದಲಾಗುವುದಾದರೆ ತರಾತುರಿಯಲ್ಲಿ 12ಸಾವಿರ ಕೋಟಿ ರೂ. ಯೋಜನೆ ಯಾಕೆ? ಅವರಿಗೆ ಅಂತಹ ದರದ್ ಏನಿದೆ, ಯಾವ ಕಾರಣಕ್ಕಾಗಿ ಈ ತೀರ್ಮಾನ? ಈಗಲೂ ದುಡ್ಡು ಹೊಡೆಯಲಿಕ್ಕಾ, ರಾಜ್ಯದ ತೆರಿಗೆ ಹಣ ಲೂಟಿ ಮಾಡಲಿಕ್ಕಾ? ಎಂದು ಸಿಎಂ ಬಿಎಸ್‌ವೈ‌ಗೆ ಮಾಜಿ ಸಿಎಂ ಪ್ರಶ್ನೆ ಮಾಡಿದ್ದಾರೆ.

ಇದು ನನಗೆ ಸಂಬಂಧಿಸಿದ ವಿಷಯ ಅಲ್ಲ, ಬಿಜೆಪಿ ಆಂತರಿಕ ವಿಚಾರ. ಬಿಜೆಪಿ ನಿರ್ಧಾರದಲ್ಲಿ ಮೂಗು ತೂರಿಸುವುದು ಶೋಭೆ ತರಲ್ಲ. ಸಿಎಂ ಬದಲಾವಣೆ ವಿಚಾರ 2 ವರ್ಷಗಳಿಂದ ನಡೆಯುತ್ತಿದೆ.

ಸದ್ಯ ಜನರು ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ.ಇಂತಹ ವಿಷಯಗಳಿಗೆ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಬಿಎಸ್‌ವೈಗೆ ಮಠಾಧೀಶರ ಬೆಂಬಲ ವಿಚಾರಕ್ಕೆ ನಾನು ಮಹತ್ವ ಕೊಡುವುದಿಲ್ಲ. ಒಬ್ಬೊಬ್ಬರಲ್ಲಿ ಒಂದೊಂದು ಭಾವನೆ ಇದೆ, ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ಅವರ ಭಾವನೆ ಸರಿಯೋ ತಪ್ಪೋ ನಿರ್ಧಾರ ಜನರದ್ದು. ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಚಾರ 2ವರ್ಷಗಳಿಂದ ನಡೆಯುತ್ತಿದೆ ಎಂದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...