ಚಿಕ್ಕಬಳ್ಳಾಪುರ: ʻರಿಸಲ್ಟ್ ಬಂದಾಯ್ತಲ್ಲʼ… ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ನೀಡಿದ ಪ್ರತಿಕ್ರಿಯೆ ಇದು.
ನಂದಿಬೆಟ್ಟಕ್ಕೆ ರೂಪ್ ವೇ ಅಳವಡಿಸುವ ಸಂಬಂಧ ಸ್ಥಳ ಪರಿಶೀಲನೆಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನೋಡಿಕೊಳ್ಳುತ್ತದೆ, ನನಗೇನೂ ಗೊತ್ತಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಹಾಗೂ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಲು ಸ್ಪಷ್ಟವಾಗಿ ನಿರಾಕರಿಸಿದರು.
ಕೊನೆಯದಾಗಿ, ರಿಸಲ್ಟ್ ಬಂದಾಗಿದೆಯಲ್ಲ ಎಂದು ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ಬೇಕಾದಾಗ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲಸಗಳನ್ನು ಮಾಡಿಸಿಕೊಳ್ಳುವರು. ನಂತರ ಅವರನ್ನೇ ದೂಷಿಸುವರು ಎಂದರು.
ಬಿ.ವೈ.ವಿಜಯೇಂದ್ರ ಅವರು ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಯೋಗೇಶ್ವರ್ ಧ್ವನಿ ಎತ್ತಿದ್ದರು.