NEWSನಮ್ಮರಾಜ್ಯರಾಜಕೀಯ

ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು: ಸಿದ್ದರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು.‌ ಇಲ್ಲಿ ಜನಾಭಿಪ್ರಾಯವೇ ಅಂತಿಮ. ಮಠಾಧೀಶರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮಠಗಳ ಬಗ್ಗೆ ಜನರಿಗಿರುವ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

2019ರಲ್ಲಿ ಬಂದ ಪ್ರವಾಹದಿಂದ ಸಂತ್ರಸ್ತರಾದವರಿಗೇ ಇನ್ನೂ ರಾಜ್ಯ ಬಿಜೆಪಿ ಸರ್ಕಾರ ಪರಿಹಾರ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ, ಜಾನುವಾರಗಳ ಪ್ರಾಣ ಹಾನಿಯಾಗಿದೆ, ಮನೆಗಳು ಬಿದ್ದಿವೆ. ಇಂತಹಾ ಸಮಯದಲ್ಲಿ ಸರ್ಕಾರ ಯುದ್ದೋಪಾದಿಯಲ್ಲಿ ಕೆಲಸ ಮಾಡೋ ಬದಲು ಸಿಎಂ ಬದಲಾವಣೆ ಮಾಡುವ ಕೆಲಸದಲ್ಲಿ ಮುಳುಗಿದೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ದಲಿತರನ್ನು ಸಿಎಂ ಮಾಡಲಿ ಎಂದು ನಳಿನ್‌ ಕುಮಾರ್‌ ಕಟೀಲ್‌ ನನಗೆ ಹೇಳಿದ್ದರು. ನಮ್ಮ ಪಕ್ಷದಲ್ಲಿ ದಲಿತರು ಸಿಎಂ ಆಗಿದ್ದಾರೆ.‌ ಹೀಗಾಗಿ ಸದ್ಯ ಬಿಜೆಪಿಗೆ ಆ ಅವಕಾಶ ಇದೆ, ನಳಿನ್ ಕುಮಾರ್ ಕಟೀಲ್ ಅವರು ಈಗ ದಲಿತರನ್ನು ಸಿಎಂ ಮಾಡಿ, ಸಾಮಾಜಿಕ ನ್ಯಾಯ ಎತ್ತಿಹಿಡಿಯಲಿ ಎಂದು ಕಾಲೆಳೆದಿದ್ದಾರೆ.

ದಲಿತರ ಬಗ್ಗೆ ರಾಜ್ಯ ಬಿಜೆಪಿ ಅವರಿಗೆ ನೈಜ ಕಾಳಜಿ ಇದ್ದರೆ ಬಿಎಸ್‌ವೈ ಅವರು ರಾಜೀನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ. ಇದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ನನ್ನ ಸವಾಲು ಎಂದು ಸವಾಲು ಹಾಕಿದ್ದಾರೆ.

ವಲಸಿಗ ಸಚಿವರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನಮ್ಮ‌ ಪಕ್ಷಕ್ಕೆ ಬರುತ್ತಾರೋ, ಇಲ್ಲವೋ ಎನ್ನುವುದು ನನಗಂತೂ ಗೊತ್ತಿಲ್ಲ. ಪಕ್ಷಕ್ಕೆ ಅವರನ್ನು ವಾಪಾಸು ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಸದನದಲ್ಲೇ ಹೇಳಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಿದ್ದೇನೆ ಎಂದು ಪುನರ್‌ ಉಚ್ಚರಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ