NEWSನಮ್ಮರಾಜ್ಯಸಿನಿಪಥ

ನಟ ದರ್ಶನ್ ತೇಜೋವಧೆ: ಕ್ರಮಕ್ಕೆ ಅಭಿಮಾನಿಗಳ ಒತ್ತಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ : ಚಲನ ಚಿತ್ರನಟ ತೂಗುದೀಪ್ ದರ್ಶನ್‌ಗೆ ತೇಜೋವಧೆ ಮಾಡಿ ಸಮಾಜದ ಸ್ವಾಸ್ಥ್ಯ ಕದಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಯುವಸೇನೆ ತಹಸೀಲ್ದಾರ್ ಚಂದ್ರಮೌಳಿ ಅವರಿಗೆ ಮನವಿ ಸಲ್ಲಿಸಲಾಯಿತು.

ಯಾವುದೆ ಅಧಾರವಿಲ್ಲದೆ ಚಲನಚಿತ್ರ ನಟ ದರ್ಶನ್ ವಿರುದ್ಧ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ದಲಿತ ಸಪ್ಲೆಯರ್ ಮೇಲೆ ಹಲ್ಲೆ ಮಾಡಿದ್ಧಾರೆ ಎಂದು ಸುಳ್ಳು ಆರೋಪಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಕದಡುವ ಕೆಲಸಕ್ಕೆ ಮುಂದಾಗಿದ್ಧಾರೆ.

ಹಲ್ಲೆಗೆ ಒಳಗಾದವರಾಗಲ್ಲಿ ಯಾರು ಕೂಡ ಪೊಲೀಸ್‌ಠಾಣೆಯಲ್ಲಿ ಮೊಕ್ಕದಮೆ ದಾಖಲಿಸಿಲ್ಲ ದರ್ಶನ್‌ಗೆ ಕೆಟ್ಟಹೆಸರು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಮಾಧ್ಯಮಗಳ ಮುಂದೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿದ್ದು ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಭಿಮಾನಿ ಸಂಘ ಅಧ್ಯಕ್ಷ ಮಂಜು, ಉಪಾಧ್ಯಕ್ಷ ಲೋಕೇಶ್, ಪದಾಧಿಕಾರಿಗಳಾದ ಶಶಿ, ಅಭಿ, ಧನು, ಮಹದೇವ್ ಸೇರಿದಂತೆ ಮತ್ತಿತರರು ಇದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ