NEWSನಮ್ಮರಾಜ್ಯರಾಜಕೀಯ

ಮೂರು ಮಕ್ಕಳಿಗಿಂತ ಹೆಚ್ಚಿದ್ದರೆ ಭಾಗ್ಯಲಕ್ಷ್ಮಿ ಯೋಜನೆ ಹಿಂದಿರುಗಿಸಬೇಕು !?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಗೆ ನೀಡಿದ್ದ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಮೂರು ಮತ್ತು ಅದಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದ್ದು, ಸದ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ. ಬಿಪಿಎಲ್ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಗುವಿಗೆ 18 ವರ್ಷ ತುಂಬಿದ ನಂತರ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 1 ಲಕ್ಷ ರು ಹಣ ನೀಡಲಾಗುತ್ತದೆ. 2005-06ನೇ ಸಾಲಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿತ್ತು.

ಆದರೆ, ಪ್ರಸ್ತುತ ಮೂರು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಂದ 2006 ಮತ್ತು 2014 ರ ನಡುವೆ ನೀಡಲಾದ ಭಾಗ್ಯಲಕ್ಷ್ಮಿ ಬಾಂಡ್‌ಗಳನ್ನು ಹಿಂಪಡೆಯಲು ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆ-ಮನೆ ಸಮೀಕ್ಷೆಯನ್ನು ಪ್ರಾರಂಭಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

2005-06ರಲ್ಲಿ ಹೊರಡಿಸಲಾದ ಭಾಗ್ಯಲಕ್ಷ್ಮಿ ಬಾಂಡ್‌ಗಳು 2023-24ರಲ್ಲಿ ಮೆಚ್ಯುರಿಟಿ ಹೊಂದಲಿವೆ, ಆದರೆ ಅನೇಕ ಫಲಾನುಭವಿ ಬಿಪಿಎಲ್ ಕುಟುಂಬಗಳು ಈಗ ಮೂರು ಮಕ್ಕಳನ್ನು ಹೊಂದಿವೆ.

ಬಾಂಡ್‌ಗಳನ್ನು ವಾಪಸ್ ತೆಗೆದುಕೊಳ್ಳಲು ತೆರಳುವ ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳಿಂದ ಪ್ರತಿರೋಧವನ್ನು ಎದುರಿಸುತ್ತಿದೆ, ವಿಶೇಷವಾಗಿ ಕೊಪ್ಪಳ ಜಿಲ್ಲೆಯ ಕುಕನೂರ್ ತಾಲ್ಲೂಕಿನಲ್ಲಿ ತೀವ್ರ ವಿರೋಧ ಎದುರಾಗಿದೆ. ಇಂತಹ 50,000 ಕ್ಕೂ ಹೆಚ್ಚು ಕುಟುಂಬಗಳು ರಾಜ್ಯಾದ್ಯಂತ ಇವೆ, ಆದರೆ ಕೇವಲ ಕೊಪ್ಪಳ ಜಿಲ್ಲೆಯನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂರು ಅಥವಾ ಹೆಚ್ಚಿನ ಮಕ್ಕಳೊಂದಿಗೆ ಬಿಪಿಎಲ್ ಕುಟುಂಬಗಳಿಗೆ ನೀಡಲಾದ ಬಾಂಡ್‌ಗಳನ್ನು ಹಿಂಪಡೆಯುವ ಕ್ರಮವನ್ನು ಸರ್ಕಾರ ಪ್ರಾರಂಭಿಸಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾಗ್ಯಲಕ್ಷ್ಮಿ ಬಾಂಡ್‌ಗಳನ್ನು ನೀಡಿದಾಗ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಬಾರದು ಎಂದು ಬಿಪಿಎಲ್ ಕುಟುಂಬಗಳಿಗೆ ಮಾಹಿತಿ ನೀಡಲಾಗಿತ್ತು ಎಂದು ಇಲಾಖೆಯ ಉಪನಿರ್ದೇಶಕ ಅಕ್ಕಮಹಾದೇವಿ ತಿಳಿಸಿದರು.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬವು ಇಬ್ಬರು ಮಕ್ಕಳನ್ನು ಹೊಂದಿದರೆ ಮಾತ್ರ ಯೋಜನೆಯ ಪ್ರಯೋಜನವನ್ನು ಖಚಿತಪಡಿಸಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಏತನ್ಮಧ್ಯೆ ಸರ್ಕಾರ ತನ್ನ ಈ ಆದೇಶವನ್ನು ಹಿಂಪಡೆಯಬೇಕು ಎಂದು ಬಿಪಿಎಲ್ ಕುಟುಂಬಗಳು ಒತ್ತಾಯಿಸಿವೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ