NEWSನಮ್ಮರಾಜ್ಯರಾಜಕೀಯ

ಕಣ್ಣೀರು ಹೇಳುತ್ತಿದ್ದವು ಇದು ‘ಪದತ್ಯಾಗ’ ಅಲ್ಲ, ‘ಪದಚ್ಯುತಿ’ : ಕಾಂಗ್ರೆಸ್ ಹೇಳಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದು ‘ಪದತ್ಯಾಗ’ ಅಲ್ಲ, ‘ಪದಚ್ಯುತಿ’ ಎನ್ನುವುದನ್ನು ಕಣ್ಣೀರು ಹೇಳುತ್ತಿದ್ದವು ಎಂದು ರಾಜ್ಯ ಕಾಂಗ್ರೆಸ್ ಪಕ್ಷವು ಯಡಿಯೂರಪ್ಪ ರಾಜೀನಾಮೆ ಕುರಿತು ಸೋಮವಾರ ವ್ಯಂಗ್ಯವಾಡಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು ರಾಜೀನಾಮೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಇದು ‘ಪದತ್ಯಾಗ’ ಅಲ್ಲ, ‘ಪದಚ್ಯುತಿ’ ಎನ್ನುವುದನ್ನು ಸಿಎಂ ಯಡಿಯೂರಪ್ಪ ಕಣ್ಣೀರು ಹೇಳುತ್ತಿದ್ದವು ಎಂದು ಹೇಳಿದೆ.

ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು ಯಡಿಯೂರಪ್ಪ ಅವರು ರಾಜೀನಾಮೆ ಘೋಷಣೆ ಮಾಡುವ ಮೂಲಕ ಒಪ್ಪಿಕೊಂಡಂತಾಗಿದೆ. ಅವರೇ ಹೇಳಿಕೊಳ್ಳುವಂತೆ ಸಮರ್ಥ ಆಡಳಿತವೇ ಆಗಿದ್ದಿದ್ದರೆ ಈ ‘ಪದಚ್ಯುತಿ’ ಮಾಡಿದ್ದೇಕೆ ಎಂದು ಪ್ರಶ್ನಿಸಿದೆ.

ಬಿಜೆಪಿಯ ದುರಾಡಳಿತದಿಂದ ಬೇಸತ್ತ ರಾಜ್ಯದ ಜನತೆ ಬಯಸುತ್ತಿರುವುದು “ನಾಯಕತ್ವ ಬದಲಾವಣೆ” ಅಲ್ಲ “ಸರ್ಕಾರದ ಬದಲಾವಣೆ” ಬಿಜೆಪಿಗೆ ತಾಕತ್ತಿದ್ದರೆ, ನೈತಿಕತೆಯಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ, ರಾಜ್ಯವನ್ನು ಯಾರು ಆಳಬೇಕು ಎನ್ನುವುದನ್ನು ಜನರೇ ನಿರ್ಧರಿಸಲಿ ಎಂದು ಹೇಳಿದೆ.

ವೈಫಲ್ಯಕ್ಕಾಗಿಯೇ? ಒತ್ತಡಕ್ಕಾಗಿಯೇ? ಅಸಹಕಾರಕ್ಕಾಗಿಯೇ? ಬೆದರಿಕೆಗಾಗಿಯೇ? ಬ್ಲಾಕ್‌ಮೇಲ್‌ಗಾಗಿಯೇ? ಯಾವ ಕಾರಣಕ್ಕಾಗಿ ಕಣ್ಣೀರಿನೊಂದಿಗೆ ರಾಜೀನಾಮೆ ನೀಡಿದ್ದು ಎನ್ನುವುದನ್ನ ರಾಜ್ಯದ ಜನತೆಗೆ ತಿಳಿಸುವಿರಾ ಯಡಿಯೂರಪ್ಪ ಅವರೇ? ಸಮರ್ಪಕ ಆಡಳಿತ ನಡೆಸಲು ನಿಮಗೆ ಯೋಗ್ಯತೆ ಒದಗಿಬರುವುದು ಯಾವಾಗ ಹೇಳುವಿರಾ ಎಂದು ಕೇಳಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...