NEWSನಮ್ಮರಾಜ್ಯರಾಜಕೀಯ

ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜಾರಿ ಪಾರ್ಟಿ’: ಸಿದ್ದರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಅವರ ಬಗ್ಗೆ ನನಗೆ ಅನುಕಂಪವಿದೆ. ಅವರಿಗೆ ವಯಸ್ಸಾಯಿತೆಂದು ಅವರ ಪಕ್ಷದ ದೆಹಲಿ ನಾಯಕರೇ ಹೇಳುತ್ತಿದ್ದಾರೆ. ಅವರ ಮುಂದಿನ ಜೀವನ ಸುಖಕರವಾಗಿರಲಿ, ಅವರಿಗೆ ನೆಮ್ಮದಿ ಸಿಗಲಿ ಎಂದಷ್ಟೇ ನಾನು ಆಶಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಎಸ್‌ವೈ ರಾಜೀನಾಮೆ ನಿರೀಕ್ಷಿತವಾದುದು. ಹಿಂದೆಯೇ ನಾನು ಹೇಳಿರುವುದು ನಿಜವಾಗಿದೆ. ಈ ಬಗ್ಗೆ ಸಂಭ್ರಮ ಪಡುವಂತಹದ್ದೇನೂ ಇಲ್ಲ. ಭ್ರಷ್ಟ ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಿದಾಗಲೇ ನಾವು ಸಂಭ್ರಮಿಸುವುದು. ಆ ದಿನಗಳು ಸದ್ಯದಲ್ಲಿಯೇ ಬರಲಿದೆ ಎಂದು ಟ್ವೀಟ್‌ ಮಾಡಿದ್ದಾರೆ

ಬಿಎಸ್‌ವೈ ಅವರು ಹೋದರೂ, ಇನ್ನೊಬ್ಬರು ಬಂದರೂ ಅದರ ಭ್ರಷ್ಟತೆಯ ಆತ್ಮ ಬದಲಾಗುವುದಿಲ್ಲ. ದುಡ್ಡಿನ ಬಲದಿಂದ ನಡೆಸಿದ್ದ ಆಪರೇಷನ್ ಕಮಲ ಎಂಬ ಅನೈತಿಕ ಹಾದಿಯಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರ ತೊಲಗಿದಾಗಲೇ ಕರ್ನಾಟಕದ ಜನತೆಗೆ ನೆಮ್ಮದಿ ಎಂದು ಹೇಳಿದ್ದಾರೆ.

ಚುನಾವಣೆಯಲ್ಲಿ ಸೋತಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುವುದು ಪ್ರಜಾಪ್ರಭುತ್ವದ ರೂಢಿ. ಆದರೆ ಶಾಸನ ಸಭೆಯಲ್ಲಿ ಬಹುಮತ ಹೊಂದಿದ್ದ ಪಕ್ಷದ ಮುಖ್ಯಮಂತ್ರಿ ರಾಜೀನಾಮೆ ನೀಡಿದಾಗ, ಅದಕ್ಕೆ ಕಾರಣವನ್ನು ನೀಡಬೇಕಾಗುತ್ತದೆ. ಬಿಎಸ್‌ವೈ ರಾಜೀನಾಮೆಗೆ ಕಾರಣ ಅವರ ವಯಸ್ಸೇ ಇಲ್ಲವೇ ಅವರ ಸರ್ಕಾರದ ಭ್ರಷ್ಟಾಚಾರವೇ ಎಂದು ಪ್ರಶ್ನಿಸಿದ್ದಾರೆ.

BJP ಎಂದರೆ ‘ಭ್ರಷ್ಟಾಚಾರ ಜಾರಿ ಪಾರ್ಟಿ’. ಇನ್ನು ಬಿಎಸ್‌ವೈ ಭ್ರಷ್ಟಾಚಾರದ ಬಗ್ಗೆ ಅವರ ಪಕ್ಷದ ಶಾಸಕರೇ ಬಾಯ್ತುಂಬ ಮಾತನಾಡಿದ್ದಾರೆ. ‘ನಾ ಖಾವುಂಗಾ, ನಾ ಖಾನೆ ದೂಂಗಾ’ ಎಂದು ಹೇಳುತ್ತಿರುವ ಪ್ರಧಾನಿ ಮೋದಿ ಅವರಿಗೆ ಒಂದಿಷ್ಟು ಮರ್ಯಾದೆ ಇದ್ದರೆ, ಯಡಿಯೂರಪ್ಪನವರ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...