NEWSನಮ್ಮರಾಜ್ಯಶಿಕ್ಷಣ-

ಆಮ್ ಆದ್ಮಿ ಪಾರ್ಟಿಯಿಂದ ಜು.30 ರಂದು ಶಿಕ್ಷಣ ಸಮ್ಮೇಳನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಟ್ಟ ಉಳಿಸಿಕೊಳ್ಳಲು ಹೆಣಗಾಡುವ ಸರ್ಕಾರದಿಂದ ದೆಹಲಿ ಮಾದರಿಯ ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ಹೇಗೆ ನಿರೀಕ್ಷಿಸಲು ಸಾಧ್ಯ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಟೀಕಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯದ ಶಿಕ್ಷಣ ವ್ಯವಸ್ಥೆ ಆಘಾತಕಾರಿ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮಕ್ಕಳ ಭವಿಷ್ಯ ಡೋಲಾಯಮಾನವಾಗಿದೆ. ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ಅಸಮರ್ಪಕ ನಿರ್ಧಾರಗಳ ಫಲ ಇಂದು ಶಿಕ್ಷಣ ಕ್ಷೇತ್ರ ಅಧೋಗತಿಗೆ ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಮ್ ಆದ್ಮಿ ಪಾರ್ಟಿ ಶಿಕ್ಷಣ ವ್ಯವಸ್ಥೆ ಎದುರಿಸುತ್ತಿರುವ ಸಮಸ್ಯೆಗಳ ಕಡೆಗೆ ಜನತೆಯ ಮತ್ತು ಸರ್ಕಾರದ ಗಮನ ಸೆಳೆದು ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆ ತರುವ ಕುರಿತು “ಶಿಕ್ಷಣ ನಮ್ಮ ಹಕ್ಕು, ಶಿಕ್ಷಣ ನಿಮ್ಮ ಜವಾಬ್ದಾರಿ” ಎಂಬ ಶಿಕ್ಷಣ ಸಮ್ಮೇಳನವನ್ನು ಹಮ್ಮಿ ಕೊಳ್ಳುತ್ತಿದೆ. ಇದೇ ಬರುವ ಜುಲೈ 30 ಶುಕ್ರವಾರ ಸಂಜೆ 6 ಗಂಟೆಗೆ ಶಿಕ್ಷಣ ತಜ್ಞೆ ಮತ್ತು ದೆಹಲಿ ಶಾಸಕಿ ಅತೀಶಿ ಮರ್ಲೇನ ಅವರಿಂದ ಚರ್ಚೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕ್ರಾಂತಿಕಾರಕ ರೀತಿಯಲ್ಲಿ ದೆಹಲಿಯ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತಂದ ಶಿಕ್ಷಣ ವಾಸ್ತುಶಿಲ್ಪಿ ಅತಿಶಿ ದೆಹಲಿ ಮಾದರಿಯ ಶಿಕ್ಷಣ ವ್ಯವಸ್ಥೆಯ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ ಮತ್ತು ಈ ಮಾದರಿಯನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಬಗ್ಗೆ ಚರ್ಚಿಸಲಿದ್ದಾರೆ. ಚರ್ಚೆಯಲ್ಲಿ ನ್ಯಾಷನಲ್ ಲಾ ಸ್ಕೂಲ್ ನ ಪ್ರಾಧ್ಯಾಪಕ ಬಾಬು ಮ್ಯಾಥ್ಯೂ ಮತ್ತು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಭಾಗವಹಿಸಲಿದ್ದಾರೆ.

ಈ ಸಮ್ಮೇಳನದಲ್ಲಿ ಮಾಜೀ ಸ್ಪೀಕರ್ ರಮೇಶ್ ಕುಮಾರ್ ಶಿಕ್ಷಣ ವ್ಯವಸ್ಥೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅಪರಾಹ್ನ 3 ಗಂಟೆಗೆ ಬೆಂಗಳೂರಿನ 20 ಲೇವೆಲ್ಲೆ ರಸ್ತೆಯ ರೋಟರಿ ಕ್ಲಬ್ ನಲ್ಲಿ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಕೆಎಎಂಎಸ್ ನ ಮುಖ್ಯಸ್ಥ ಶಶಿ ಕುಮಾರ್, IT for Change on the Role of technology in school learning solutions ಮುಖ್ಯಸ್ಥ ಗುರು ಕಾಶಿನಾಥನ್, ಅಕ್ಷರ ಫೌಂಡೇಶನ್ ನ ಗಣಿತ ಶಿಕ್ಷಕಿ ಪುಷ್ಪಾ ತಂತ್ರಿ, ಶಿಕ್ಷಕಿ ಉಷಾ ಮೋಹನ್, ದಕ್ಷ್ ನ ಪ್ರೋಗ್ರಾಂ ಡೈರೆಕ್ಟರ್ ಸೂರ್ಯಪ್ರಕಾಶ್ ಬಿ ಎಸ್ “ಕರ್ನಾಟಕದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟಿಗೆ ಕಾರಣ ಮತ್ತು ಪರಿಹಾರ” ಎಂಬ ವಿಷಯದ ಕುರಿತು ಚರ್ಚೆ ನಡೆಸಲಿದ್ದಾರೆ.

ಪ್ರಕಾಶ್ ನೆಡುಂಗಡಿ, ವಿಜಯ್ ಶಾಸ್ಟ್ರೀಮಠ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ