NEWSಕೃಷಿರಾಜಕೀಯ

ಬಿಜೆಪಿ ಪಕ್ಷದಲ್ಲಿ ಪ್ರಜಾಪ್ರಭುತ್ವವೇ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಯಮಕನಮರಡಿ: ಬಿಜೆಪಿ ಪಕ್ಷದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಬಿಎಸ್‌ವೈ ಅವರು ಶಾಸಕರ ಬೆಂಬಲದ ಮೇಲೆ ಮುಖ್ಯಮಂತ್ರಿಯಾದವರು, ಅವರನ್ನು ಇದ್ದಕ್ಕಿದ್ದಂತೆ ಕಿತ್ತು ಹಾಕಿದ್ದಾರೆ, ಮುಂದಿನ ಮುಖ್ಯಮಂತ್ರಿ ಆಯ್ಕೆಯ ಹಕ್ಕು ಕೂಡ ಶಾಸಕರಿಗಿಲ್ಲ. ರಾಜ್ಯ ಬಿಜೆಪಿ ಶಾಸಕರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿದೆ? ಹೈಕಮಾಂಡ್ ಮಾತಿಗೆ ಸುಮ್ಮನೆ ತಲೆಯಾಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬೆಳಗಾವಿಯ ಯಮಕನಮರಡಿ ವಿಧಾನಸಭೆ ಕ್ಷೇತ್ರದಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ಆರಂಭಿಸಿರುವ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಜನರಿಗೆ ಒದಗಿಸಿರುವ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.

ಮಲಪ್ರಭಾ ನದಿ ನೀರು ಊರೊಳಗೆ ನುಗ್ಗಿದ ಪರಿಣಾಮ ಬೆಳಗಾವಿ ಜಿಲ್ಲೆಯ ದುರ್ಗಾನಗರ ಮತ್ತು ಮಾರುತಿ ನಗರ ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿವೆ.‌ ಊರಿನ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆಯಾದರೂ ಅಲ್ಲಿ ಅಗತ್ಯ ಸೌಲಭ್ಯ ನೀಡಿಲ್ಲ. ಹಾಗಾಗಿ ಇಂದು ಅಧಿಕಾರಿಗಳ ಸಭೆ ನಡೆಸಿ, ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಹೆಚ್ಚು ಮಳೆಯಾದಗಲೆಲ್ಲಾ ಊರೊಳಗೆ ನೀರು ನುಗ್ಗುತ್ತಿದೆ, ಇದನ್ನು ತಪ್ಪಿಸಲು ನಾಲೆಗೆ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು 13 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆಯ ನೀಲನಕ್ಷೆಯನ್ನು ಸಿದ್ಧಪಡಿಸಿದ್ದಾರೆ. ತಡೆಗೋಡೆ ನಿರ್ಮಾಣ ಕುರಿತು ಸರ್ಕಾರದ ಜೊತೆ ನಾನು ಮಾತನಾಡುತ್ತೇನೆ ಎಂದು ಹೇಳಿದರು.

ಕೆಲವು ಮನೆಗಳಲ್ಲಿ ಮೂರು – ನಾಲ್ಕು ಕುಟುಂಬಗಳು ವಾಸವಿರುತ್ತವೆ. ಅಂತಹ ಮನೆಗಳು ಪ್ರವಾಹದಿಂದ ಬಿದ್ದುಹೋದರೆ ಪ್ರತಿ ಕುಟುಂಬಕ್ಕೂ ಪ್ರತ್ಯೇಕ ಮನೆ ಕಟ್ಟಿಸಿಕೊಡುವಂತೆ ನಾನು ಈ ಹಿಂದೆಯೇ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದೆ. ಆದರೆ ಸರ್ಕಾರ ಅಂತಹ ಕುಟುಂಬಕ್ಕೆ ಕೇವಲ ಒಂದು ಮನೆ ಕಟ್ಟಿಸಿಕೊಟ್ಟು ಕೈತೊಳೆದುಕೊಂಡಿದೆ ಎಂದು ಕಿಡಿಕಾರಿದರು.

ಬೆಳಗಾವಿ – ಗೋವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅರ್ಧದಲ್ಲೇ ಸ್ಥಗಿತಗೊಂಡಿದೆ. ಈ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆಯುತ್ತೇನೆ ಎಂದರು.

ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಇದ್ದರು.

 

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...