NEWSಕೃಷಿದೇಶ-ವಿದೇಶನಮ್ಮರಾಜ್ಯರಾಜಕೀಯ

ಕರ್ನಾಟಕಕ್ಕೆ 629.03 ಕೋಟಿ ರೂ. ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಈ ಬಾರಿಯ ಮಳೆಗಾಲದಲ್ಲಿ ಈವರೆಗಿನ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 629.03 ಕೋಟಿ ರೂ. ಪರಿಹಾರ ಘೋಷಿಸಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಇನ್ನು ಮಹಾರಾಷ್ಟ್ರಕ್ಕೆ 701 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಎಸ್​ಡಿಆರ್​ಎಫ್ ಮಾನದಂಡಗಳ ಅಡಿಯಲ್ಲಿ ಅತಿವೃಷ್ಟಿ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ವರ್ಷ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿದಿದೆ. ಉತ್ತರ ಕನ್ನಡ, ಬೆಳಗಾವಿ ಸೇರಿ ಕೆಲವು ಜಿಲ್ಲೆಗಳು ಮಳೆಯ ಆರ್ಭಟಕ್ಕೆ ಸಂಪೂರ್ಣ ತತ್ತರಿಸಿವೆ. ಜತೆಗೆ ಅಲ್ಲಲ್ಲಿ ಭೂಕುಸಿತವೂ ಸಂಭವಿಸಿದೆ. ಈ ನಡುವೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಕರ್ನಾಟಕದಲ್ಲಿ ಸುಮಾರು ಎರಡು ವಾರಕ್ಕೂ ಹೆಚ್ಚು ಕಾಲ ಧಾರಾಕಾರವಾಗಿ ಸುರಿದ ಮಳೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿ ಇದೀಗ ಕೊಂಚ ಶಾಂತವಾದಂತೆ ಕಾಣುತ್ತಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ನಿದ್ದೆಗೆಡಿಸುವಂತೆ ಸುರಿದ ಮಳೆಯು ಪ್ರವಾಹ, ಭೂ ಕುಸಿತ, ಬೆಳೆ ನಾಶಕ್ಕೆ ಕಾರಣವಾಗಿ ಜನಜೀವನವನ್ನೇ ಅಸ್ತವ್ಯಸ್ತ ಮಾಡಿದೆ.

ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿದ ಕಾರಣ ಹಲವೆಡೆ ವಸತಿ ಪ್ರದೇಶಕ್ಕೆ ನೀರುನುಗ್ಗಿ ಮನೆಗಳು ಜಲಾವೃತಗೊಂಡು ಜನರು ಸಮಸ್ಯೆ ಅನುಭವಿಸಿದ್ದಾರೆ. ಆದರೆ, ಇದೀಗ ಮಳೆಯ ಆರ್ಭಟ ತಗ್ಗಿದಂತೆ ಕಂಡುಬಂದರೂ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳು ಎಚ್ಚರಿಸಿವೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ