ಬೆಂಗಳೂರು: ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಇಂದು ಬೆಳಗ್ಗೆ 10.58ರಿಂದ 11ಗಂಟೆಯೊಳಗೆ ಪ್ರಮಾಣವಚನ ಸ್ವೀಕರಿಸಿದರು.
ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರಿಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರತಿಜ್ಞಾವಿಧಿ ಸಮಾರಂಭಕ್ಕೂ ಮೊದಲು ಬಾಲಬ್ರೂಯಿ ಆಂಜನೇಯ ದೇವಾಲಯ ಮತ್ತು ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಬೊಮ್ಮಾಯಿ ಭೇಟಿ ನೀಡಿದ್ದರು. ಇನ್ನೊಂದು ವಾರದಲ್ಲಿ ನೂತನ ಸಂಪುಟ ಸಹ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ.
ಸುದ್ದಿಗಾರರೊಂದಿಗೆ ಮಾತನಾಡಿದ್ದ ಬೊಮ್ಮಾಯಿ, ನಾನು ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಇರಲಿಲ್ಲ. ಪಕ್ಷದ ಹೈಕಮಾಂಡ್ ನಾಯಕರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದಾರೆ. ನಾನು ದೆಹಲಿಗೆ ಹೋಗಲಿಲ್ಲ. ಅವರೇ ಗುರುತಿಸಿ ಜವಾಬ್ದಾರಿ ನೀಡಿದ್ದಾರೆ. ಹಿರಿಯರ ಮಾರ್ಗದರ್ಶನ ಪಡೆದು ಸಂಪುಟ ರಚಿಸುತ್ತೇನೆ ಎಂದು ಹೇಳಿದ್ದಾರೆ.