NEWSನಮ್ಮಜಿಲ್ಲೆರಾಜಕೀಯ

ಭವಿಷ್ಯದಲ್ಲಿ ವಿಜಯೇಂದ್ರ ಸಿಎಂ: ಇಂದಿನಿಂದ ಬಿಎಸ್‌ವೈ ತಯಾರಿ ಎಂದ ಅಸ್ನೋಟಿಕರ್

ವಿಜಯಪಥ ಸಮಗ್ರ ಸುದ್ದಿ

ಕಾರವಾರ: ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಿರುವುದು ಭವಿಷ್ಯದಲ್ಲಿ ವಿಜಯೇಂದ್ರ ಅವರನ್ನು ಸಿಎಂ ಮಾಡುವುದಕ್ಕಾಗಿ ಎಂದು ಕಾರವಾರದಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಆಯ್ಕೆಯ ಮೂಲಕ ಬಿ.ಎಸ್. ಯಡಿಯೂರಪ್ಪನವರು ಪಕ್ಷದಲ್ಲಿ ಹಿಡಿತ ಸಾಧಿಸಿದ್ದಾರೆ. ಸೂಪರ್ ಸಿಎಂ ಆಗಿ ಯಡಿಯೂರಪ್ಪ ಇನ್ನು ಮುಂದೆ ರಾಜ್ಯದಲ್ಲಿ ಅಧಿಕಾರ ಚಲಾಯಿಸುತ್ತಾರೆ ಎಂದರು.

2023ಕ್ಕೆ ವಿಜಯೇಂದ್ರ ಅವರನ್ನು ಸಿಎಂ ಮಾಡಲು ಬೊಮ್ಮಾಯಿ ಅವರನ್ನು ಈಗ ಸಿಎಂ ಮಾಡಿದ್ದಾರೆ. ಯತ್ನಾಳ್ ಹಾಗೂ ಯೋಗೇಶ್ವರ್ ಐದಾರು ತಿಂಗಳಿನಿಂದ ಯಡಿಯೂರಪ್ಪನವರ ವಿರುದ್ಧ ಮಾತನಾಡುತ್ತಿದ್ದರು. ಯತ್ನಾಳ್ ಬೋನಿನಲ್ಲಿ ಇದ್ದ ಮಂಗನ ರೀತಿ ಕೂಗಾಟ ಮಾಡಿದರು ಏನು ಮಾಡಿಕೊಳ್ಳಲಾಗಲಿಲ್ಲ. ಬಿಜೆಪಿ ಶಿಸ್ತಿನ ಪಕ್ಷ ಆಗಿದಿದ್ದರೇ ಅವರಿಬ್ಬರನ್ನು ಮಂತ್ರಿ ಮಾಡಬಾರದು ಎಂದು ಒತ್ತಾಯಿಸಿದರು.

ಇನ್ನು ಬಿಜೆಪಿ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಆಗಿ ಮಾಡಿರುವುದು ಒಳ್ಳೆಯ ಆಯ್ಕೆ. ಇದರಿಂದ ಬಿಜೆಪಿಗೆ ಭವಿಷ್ಯದಲ್ಲಿ ಲಾಭವಾಗಲಿದೆ. ರಾಜ್ಯಕ್ಕೆ ಒಳ್ಳೆಯ ದಿನ ಬರುತ್ತದೆ. ಈಗಿನ ಸರ್ಕಾರ ಬೆಳವಣಿಗೆ ಮುಂದೆ ಜೆಡಿಎಸ್‌ಗೆ ಒಳ್ಳೆಯದಾಗಲಿದೆ. ಮುಂದಿನ ಬಾರಿ ಸರ್ಕಾರ ರಚನೆ ವೇಳೆ ಕುಮಾರಸ್ವಾಮಿ ದೊಡ್ಡ ರೋಲ್ ತೆಗೆದುಕೊಳ್ಳುತ್ತಾರೆ ಎಂದು ಭವಿಷ್ಯ ನುಡಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ