ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆದಾಯದಲ್ಲಿ ಹೆಚ್ಚಳವಾಗಿದ್ದು, ದಿನ ಒಂದಕ್ಕೆ ಸರಾಸರಿ 2.10 ಕೋಟಿ ರೂ. ತಲುಪಿದೆ ಎಂದು ಸಂಸ್ಥೆ ತಿಳಿಸಿದೆ.
ಬಿಎಂಟಿಸಿ ನೌಕರರ ಅವಿರತ ಶ್ರಮ ಮತ್ತು ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿರುವ ಪರಿಣಾಮ ಸಂಸ್ಥೆಯ ಆದಾಯದಲ್ಲಿ ಏರಿಕೆಯಾಗುತ್ತಿದೆ ಎಂದು ಸಂಸ್ಥೆಯ ಅಧಿಕಾರಿ ತಿಳಿಸಿದ್ದಾರೆ.
ಕೊರೊನಾ ಅನ್‌ಲಾಕ್ ಆದ ಬಳಿಕ ನಿತ್ಯ 17 ಲಕ್ಷ ಜನರು ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿರುವುದು ಆದಾಯದಲ್ಲಿ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ.