Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಮಾಜಿ ಸಿಎಂ ಎಸ್‌.ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್‌ ಸೇರ್ಪಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಪುತ್ರ, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹಲವು ತಿಂಗಳುಗಳ ಹಿಂದೆಯೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು, ಇಂದು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಹುಬ್ಬಳ್ಳಿಯ ಗೋಕುಲ್ ಗಾರ್ಡನ್‌ನಲ್ಲಿ ಇಂದು ನಡೆದ ಕರ್ನಾಟಕ ಕಾಂಗ್ರೆಸ್ ವಿಭಾಗ ಮಟ್ಟದ ಸಮಾರಂಭದಲ್ಲಿ ಸೇರ್ಪಡೆಗೊಂಡರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದೇ ಸಭೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಗರ ಜತೆ ಸೇರ್ಪಡೆಯಾದರು. ಕಾಂಗ್ರೆಸ್ ಬಾವುಟವನ್ನು ನೀಡುವ ಮೂಲಕ ನಾಯಕರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಕಳೆದ ಮಾರ್ಚ್‌ ನಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವುದಾಗಿ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದರು. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿಯಾಗಿ ಈ ಕುರಿತು ಚರ್ಚೆ ನಡೆಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷದ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಆದರೆ ಕೋವಿಡ್ ಪರಿಸ್ಥಿತಿಯ ಕಾರಣದಿಂದಾಗಿ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿರಲಿಲ್ಲ.

ಸಚಿವ ಸಂಪುಟ ರಚನೆ ಸುಗಮ: ಸಿಎಂ ಬಿ.ಎಸ್‌.ಬೊಮ್ಮಾಯಿ

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ