ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ದಿಢೀರ್ ದೆಹಲಿಗೆ ತೆರಳಿದ್ದಾರೆ.
ಸಿಎಂ ಇಂದು ಸಂಜೆ 5.40ರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದು, ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿಯಾಗಿ ಕರ್ನಾಟಕ ಸಚಿವ ಸಂಪುಟ ಅಂತಿಮಗೊಳಿಸುತ್ತೇವೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಂ ಹೇಳಿದ್ದಾರೆ.
ಬೊಮ್ಮಾಯಿ ನೂತನ ಸಚಿವರ ಪಟ್ಟಿ ಕೈಯಲ್ಲಿ ಹಿಡಿದೇ ತೆರಳಿದ್ದಾರೆ. ವರಿಷ್ಠರಿಂದ ಒಪ್ಪಿಗೆ ಪಡೆದು ನಾಳೆಯೇ ವಾಪಸ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಮಂಗಳವಾರ ಅಥವಾ ಬುಧವಾರ ಸಂಪುಟ ರಚನೆ ಸಾಧ್ಯತೆ ಹೆಚ್ಚಾಗಿದೆ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಒಂದೆಡೆ, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನು ಸಿಎಂ ಸಿದ್ಧಪಡಿಸಿದ್ದಾರೆ. ಮತ್ತೊಂದೆಡೆ, ಪಕ್ಷದ ವತಿಯಿಂದ ಸಚಿವ ಸ್ಥಾನಕ್ಕೆ ಅರ್ಹ ಶಾಸಕರ ಪಟ್ಟಿ ಸಿದ್ಧವಾಗಿದೆ ಎಂದು ತಿಳಿದರು ಬಂದಿದೆ.
ಜಾತಿವಾರು, ಭೌಗೋಳಿಕ ಪ್ರಾತಿನಿಧ್ಯ ಹಾಗೂ ಇತರ ಪಕ್ಷಗಳಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ, ಭಾರತೀಯ ಜನತಾ ಪಾರ್ಟಿ ಅಧಿಕಾರ ಹಿಡಿಯಲು ಕಾರಣರಾದ ಶಾಸಕರು ಎಂಬ ಈ ಮೂರು ನೆಲೆಗಟ್ಟಿನಲ್ಲಿ ಸಚಿವರ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಬಲ್ಲಮೂಲಗಳ ಮಾಹಿತಿ ನೀಡಿವೆ. ಇನ್ನು ಮುಂದಿನ ಶನಿವಾರದ ಒಳಗೆ ಸಚಿವ ಸಂಪುಟ ಪೂರ್ಣಪ್ರಮಾಣದಲ್ಲಿ ರಚನೆ ಆಗಲಿದೆ ಎಂದು ಬಿಜೆಪಿಯ ನಾಯಕರು ತಿಳಿಸಿದ್ದಾರೆ.
ಮಧ್ಯಂತರ ಚುನಾವಣೆಗೆ ಹೋಗುವ ಯೋಚನೆ ನಮಗಿಲ್ಲ: ಮಾಜಿ ಪ್ರಧಾನಿ ಎಚ್‌ಡಿಡಿ