NEWSನಮ್ಮಜಿಲ್ಲೆ

ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗ ಸೇವೆ ಶೀಘ್ರದಲ್ಲೇ ಆರಂಭ: ಅಂಜುಮ್ ಪರ್ವೇಜ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜನರ ಸೇವೆಗೆ ಸಿದ್ದವಾಗುತ್ತಿರುವ ಬೆಂಗಳೂರು ದಕ್ಷಿಣ ವಲಯದ ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗವನ್ನು ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್‌ಎಸ್) ಆಗಸ್ಟ್ 11 ಮತ್ತು 12 ರಂದು ಪರಿಶೀಲಿಸಲಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮುಂದಿನ ಐದು ವರ್ಷಗಳವರೆಗೆ ಮಾನ್ಯವಾಗಿರುವ ರೋಲಿಂಗ್ ಸ್ಟಾಕ್‌ಗಾಗಿ ನಿರ್ಣಾಯಕ ಪ್ರಮಾಣಪತ್ರವನ್ನು ರೈಲ್ವೇ ಸಚಿವಾಲಯದ ಅಂಗಸಂಸ್ಥೆಯಿಂದ ಪಡೆದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್, “ಸಿಎಂಆರ್‌ಎಸ್‌ ತಪಾಸಣೆಯು ಎಲ್ಲಾ ನಿಯತಾಂಕಗಳ ಸಂಪೂರ್ಣ ಪರಿಶೀಲನೆ ಮತ್ತು ಬೃಹತ್ ದಾಖಲೆಗಳ ಅಧ್ಯಯನವನ್ನು ಒಳಗೊಂಡಿದೆ. ಕೇಂದ್ರ ತಂಡದ ಸದಸ್ಯರು ಆಗಸ್ಟ್ 10 ರಂದು ಕೆಲವು ತಪಾಸಣೆ ನಡೆಸಲು ಆಗಮಿಸುತ್ತಾರೆ ಎಂದು ಹೇಳಿದ್ದಾರೆ.

ಇದರ ಜತೆಗೆ ಹೊಸ ಮಾರ್ಗ ಲೋಕಾರ್ಪಣೆ ಮಾಡುವ ದಿನಾಂಕ ನಿಗದಿಯಾಗಿರುವ ಬಗ್ಗೆ ಇನ್ನು ಸ್ಪಷ್ಟವಾಗಿಲ್ಲ. ಹೀಗಾಗಿ ನಾವು ಮೊದಲು ಸಿಎಂಆರ್‌ಎಸ್‌ನಿಂದ ಗ್ರೀನ್ ಸಿಗ್ನಲ್ ಪಡೆಯಬೇಕು. ನಂತರ ದಿನಾಂಕ ಅಂತಿಮಗೊಳಿಸುತ್ತೇವೆ ಎಂದು ಹೇಳಿದರು.

ಪರ್ಪಲ್ ಲೈನ್‌ನ ವಿಸ್ತರಣೆಯಾದ ಈ 7.53 ಕಿಮೀ ಮಾರ್ಗವು ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನ ಭಾರತಿ, ಪಟ್ಟಣಗೆರೆ, ಮೈಲಸಂದ್ರ ಮತ್ತು ಕೆಂಗೇರಿ ಬಸ್ ನಿಲ್ದಾಣಗಳ ಆರು ಎತ್ತರದ ನಿಲ್ದಾಣಗಳನ್ನು ಹೊಂದಿದೆ.

ಬಿಎಂಆರ್‌ಸಿಎಲ್ ತನ್ನ ರೋಲಿಂಗ್ ಸ್ಟಾಕ್‌ಗಾಗಿ ರೈಲ್ವೆ ಸಚಿವಾಲಯದ ಲಖನೌ ಮೂಲದ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್‌ಡಿಎಸ್‌ಒ) ಯಿಂದ ಪ್ರಮಾಣಪತ್ರವನ್ನು ಪಡೆದಿದೆ.

ಸಿಎಂ ಕಾರ್ಯದರ್ಶಿಯಾಗಿ ವಿ.ಪೊನ್ನುರಾಜ್ ನೇಮಕ

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು