CrimeNEWSನಮ್ಮಜಿಲ್ಲೆ

ಹಾಸನ: ಮಂಗಗಳ ಮಾರಣಹೋಮ ಪ್ರಕರಣ- ಐವರ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾಸನ: ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಿವೆ ಎಂಬುದಕ್ಕೆ ಸಾಕ್ಷಿಯಾಗಿ ನಿಂತಿದ್ದ ಮಂಗಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವು ಸಿಕ್ಕಿದೆ.

39 ಮಂಗಗಳನ್ನು ಕೊಂದು ಚೀಲದಲ್ಲಿ ತುಂಬಿ ರಸ್ತೆಯಲ್ಲಿ ಬೀಸಾಡಿದ ಪ್ರಕರಣವನ್ನು ಮೂರೇ ದಿನದಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಈ ಪ್ಕರಣದ ಸಂಬಂಧ ಐವರು ಆರೋಪಿಗಳನ್ನು ಅರೆಹಳ್ಳಿ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಉಗನೆ ಗ್ರಾಮದ ಪ್ರಸನ್ನ, ರುದ್ರೇಗೌಡ, ಚಾಲಕ ಮಂಜು ಹಾಗೂ ಮಂಗಗಳನ್ನು ಸೆರೆಹಿಡಿದಿದ್ದ ಯಶೋದಾ ಮತ್ತು ರಾಮು ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ಯಶೋದಾ ಮತ್ತು ರಾಮು ದಂಪತಿ ಬೆಳೆ ಹಾನಿ ಮಾಡುತ್ತಿವೆ ಎಂದು ಜಮೀನಿನ ಮಾಲೀಕ ಪ್ರಸನ್ನ ಹಾಗೂ ರುದ್ರೇಗೌಡ ಕೋತಿಗಳ ಸೆರೆಗೆ 40 ಸಾವಿರ ರೂ.ಗೆ ಗುತ್ತಿಗೆ ನೀಡಿದ್ದರು ಎಂದು ತಿಳಿಸಿದ್ದಾರೆ.

ಹಾಸನ ತಾಲೂಕಿನ ಉಗನೆ ಗ್ರಾಮದಲ್ಲಿ ಆಹಾರದ ಆಸೆ ತೋರಿಸಿ ಜುಲೈ 28 ರಂದು 50 ಕ್ಕೂ ಹೆಚ್ಚು ಕೋತಿಗಳನ್ನು ಚೀಲದಲ್ಲಿ ಬಂಧಿಸಿಟ್ಟಿದ್ದ ಯಶೋದಾ ಹಾಗೂ ರಾಮು, ಅವುಗಳನ್ನು ಸ್ಥಳಾಂತರ ಮಾಡುವಾಗ ಉಸಿರುಗಟ್ಟಿ ಮೃತಪಟ್ಟಿವೆ ಎಂದು ತಿಳಿಸಿದ್ದಾರೆ.

ಬೇಲೂರು ತಾಲೂಕಿನ ಚೌಡನಹಳ್ಳಿ ಬಳಿ 39 ಕೋತಿಗಳನ್ನು ಬಿಸಾಡಿ ಹೋಗಿದ್ದ ಆರೋಪಿಗಳಿಗೆ, ಮರುದಿನ ಕೋತಿಗಳ ಸಾವಿನ ಸುದ್ದಿ ತಿಳಿದಿದೆ. ಹೀಗಾಗಿ ಆಂಜನೇಯ ದೇಗುಲದಲ್ಲಿ ಹೋಮ ಹವನ, ವಿಶೇಷ ಪೂಜೆ ಮಾಡಿಸಿದ್ದಾರೆ ಎಂಬುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಅರಸೀಕೆರೆ ತಾಲೂಕಿನ ಬಾಣಾವರದ ಕೋತಿ ಸೆರೆ ತಂಡಕ್ಕೆ ಮನವಿ ಮಾಡಿದ್ದ ಜಮೀನಿನ ಮಾಲೀಕರು, ಕೋತಿ ಸೆರೆಹಿಡಿದ ದಂಪತಿ, ಮೃತ ಕೋತಿ ಸ್ಥಳಾಂತರ ಮಾಡಿದ ವಾಹನ ಚಾಲಕ ಸೇರಿ, ಒಟ್ಟು 5 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಳೆಯೇ ಹೈಕೋರ್ಟ್‌ಗೆ ವರದಿ ನೀಡಬೇಕಿದ್ದ ಹಿನ್ನೆಲೆಯಲ್ಲಿ ತ್ವರಿತ ತನಿಖೆ ನಡೆಸಿದ್ದ ಪೊಲೀಸರು ವಶಕ್ಕೆ ಪಡೆದ ಎಲ್ಲರನ್ನು ಬಂಧಿಸಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗ ಸೇವೆ ಶೀಘ್ರದಲ್ಲೇ ಆರಂಭ: ಅಂಜುಮ್ ಪರ್ವೇಜ್

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ