NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಇಂದು ಸಚಿವರ ಪಟ್ಟಿ ಫೈನಲ್‌ ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಇಂದು ಸಂಜೆಯೊಳಗೆ ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ. ಸಂಪುಟ ರಚನೆ ಕುರಿತು ಚರ್ಚೆ ಮಾಡಿದ್ದೇವೆ. ಎಷ್ಟು ಮಂದಿ ಸಂಪುಟದಲ್ಲಿರಬೇಕು ಎಂಬುದನ್ನು ಹೈಕಮಾಂಡ್ ತಿಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ನಿನ್ನೆ ಭೇಟಿಯಾದ ಬಳಿಕ ಮಾತನಾಡಿದ ಅವರು, ಎರಡ್ಮೂರು ಪಟ್ಟಿಗಳನ್ನು ಕೊಟ್ಟಿದ್ದೇನೆ. ಹೀಗಾಗಿ ಮಂಗಳವಾರ ಹೈಕಮಾಂಡ್‍ನಿಂದ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಇನ್ನು ಡಿಸಿಎಂ ಹುದ್ದೆ ಸೃಷ್ಟಿ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದಕ್ಕಿಂತ ಮುಖ್ಯವಾಗಿ ನಮ್ಮ ಪಕ್ಷದಲ್ಲಿ ಯಾರೂ ವಲಸಿಗರಲ್ಲ, ಎಲ್ಲರೂ ಬಿಜೆಪಿಯವರೇ ಎಂದು ತಿಳಿಸಿದರು.

ಪ್ರಾದೇಶಿಕತೆ, ಸಮುದಾಯ ಸೇರಿದಂತೆ ಎಲ್ಲವನ್ನೂ ಪರಿಗಣಿಸಿ ಸಂಪುಟ ಪಟ್ಟಿ ಬಿಡುಗಡೆ ಮಾಡುತ್ತಾರೆ. ಮಂಗಳವಾರ ರಾತ್ರಿಯೊಳಗೆ ಸಂಪುಟ ಸೇರುವವರ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಬಿಡುಗಡೆ ಮಾಡಲಿದ್ದು, ಬಳಿಕ ಪ್ರಮಾಣ ವಚನದ ಕುರಿತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದರು.

ಬೆಂಗಳೂರಿನಲ್ಲಿ ಪೊಲೀಸರ ಮೇಲೆ ವಿದೇಶಿ ಪ್ರಜೆಗಳು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾವು ರಾಜ್ಯದಲ್ಲಿ ಡ್ರಗ್ಸ್ ಪ್ರಕರಣ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಂಡಿದ್ದೇವೆ. ವಿದೇಶಿ ಪ್ರಜೆಗಳು ಮೊದಲು ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಪೊಲೀಸರು ಅವರ ವಿರುದ್ಧ ಸರಿಯಾದ ಕ್ರಮ ಕೈಗೊಂಡಿದ್ದಾರೆ ಎಂದು ಸಮರ್ಥಿಸಿಕೊಂಡರು.

ರಾಜ್ಯ ಸಾರಿಗೆ ನೌಕರರು 2018ರಲ್ಲೇ ಸರ್ಕಾರಿ ನೌಕರರೆಂದು ಪರಿಗಣಿಸಲು ಸಿಎಂ, ಪ್ರಧಾನಿಗೆ ಪತ್ರ ಬರೆದಿದ್ದರು

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...