NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಮೇಕೆದಾಟು ಯೋಜನೆಯ ತ್ವರಿತಗತಿಗೆ ಆಗ್ರಹಿಸಿ ಆ.5ರಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥ ಎಸ್.ವಿ.ಫಣಿರಾಜ್‌, “ಆಗಸ್ಟ್‌ 5ರ ಗುರುವಾರದಂದು ಬೆಂಗಳೂರಿನ ಆನಂದ್‌ ರಾವ್‌ ಸರ್ಕಲ್‌ ಸಮೀಪದ ಮೌರ್ಯ ಹೋಟೆಲ್‌ ಹತ್ತಿರವಿರುವ ಗಾಂಧಿ ಪ್ರತಿಮೆ ಎದುರು ನಮ್ಮ ಹೋರಾಟ ನಡೆಯಲಿದೆ ಎಂದರು.

ಪಕ್ಷದ ಸಂಚಾಲಕರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಎಎಪಿಯ ನೂರಾರು ಕಾರ್ಯಕರ್ತರು ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ. 12 ತಿಂಗಳ ಡೆಡ್‌ಲೈನ್‌ ಇಟ್ಟುಕೊಂಡು ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂಬುದು ನಮ್ಮ ಆಗ್ರಹ. ನಾಡಿನ ಒಳಿತಿಗಾಗಿ ನಡೆಯುತ್ತಿರುವ ಹೋರಾಟವನ್ನು ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬೇಕು” ಎಂದು ಮನವಿ ಮಾಡಿದರು.

ಬೆಂಗಳೂರಿನಲ್ಲಿ ಈಗಾಗಲೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ಭವಿಷ್ಯದಲ್ಲಿ ಭಾರೀ ತೊಂದರೆ ಎದುರಾಗುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಮೇಕೆದಾಟು ಯೋಜನೆ ಶೀಘ್ರದಲ್ಲೇ ಪೂರ್ಣಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ರಾಜ್ಯವನ್ನಾಳಿದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸರ್ಕಾರಗಳು ಕುಂಟುನೆಪ ಹೇಳಿ ಯೋಜನೆಯನ್ನು ಮುಂದೂಡುವ ಮೂಲಕ ಜನರನ್ನು ವಂಚಿಸಿದವು. ಈಗ ಕೇಂದ್ರ ಪರಿಸರ ಇಲಾಖೆಯ ಅನುಮೋದನೆ ಸಿಕ್ಕಿದ್ದರೂ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ಹೊಂದಿರುವ ಬಿಜೆಪಿಯ ಡಬಲ್‌ ಇಂಜಿನ್‌ ಸರ್ಕಾರ ವಿಳಂಬನೀತಿ ಅನುಸರಿಸುತ್ತಿದೆ.

ಕ್ಷುಲ್ಲಕ ರಾಜಕೀಯ ಹಾಗೂ ಆಡಳಿತ ಪಕ್ಷದ ಇಚ್ಛಾಶಕ್ತಿಯ ಕೊರತೆಯಿಂದಾಗಿ ಮೇಕೆದಾಟು ಎಂಬ ಅತ್ಯುತ್ತಮ ಯೋಜನೆ ನನೆಗುದಿಗೆ ಬಿದ್ದಿರುವುದು ವಿಪರ್ಯಾಸ ಎಂದು ಫಣಿರಾಜ್‌ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಮಹಿಳಾ ಘಟಕದ ನಾಯಕಿ ಉಷಾ ಮೋಹನ್ ಮಾತನಾಡಿ, ಮೇಕೆದಾಟುಗೆ ಅವಕಾಶ ನೀಡುವುದೇ ಇಲ್ಲವೆಂದು ತಮಿಳುನಾಡಿನ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಎರಡೂ ಪಕ್ಷಗಳಿಗೆ ಮೇಕೆದಾಟು ಯೋಜನೆಯ ಅಗತ್ಯವಿಲ್ಲವೆಂದು ಇದರಿಂದಲೇ ತಿಳಿಯುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜತೆಗೆ ಈ ದ್ವಂದ್ವನೀತಿಯನ್ನು ಬಿಟ್ಟು, ಮೇಕೆದಾಟು ವಿಷಯದಲ್ಲಿ ತಮ್ಮ ನಿಲುವು ಏನೆಂದು ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಸ್ಪಷ್ಟಪಡಿಸಬೇಕು. ಇದೊಂದು ಕೇವಲ ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ತಮಿಳುನಾಡಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದರು.

ಇನ್ನು ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ತಮಿಳುನಾಡಿನ ತಮ್ಮ ಪಕ್ಷದ ಮುಖಂಡರಿಗೆ ಇದನ್ನು ಮನವರಿಕೆ ಮಾಡಿಕೊಡಲಿ ಎಂದು ಹೇಳಿದರು.

ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ: 7ಮಂದಿಗೆ ಹೈ ಕೋರ್ಟ್‌ ನೋಟಿಸ್‌

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...