ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಏಪ್ರಿಲ್‌ನಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಿದ ವೇಳೆ ನಾಲ್ಕೂ ನಿಗಮಗಳಲ್ಲಿ ವಜಾ, ಅಮಾನತು ಮತ್ತು ವರ್ಗಾವಣೆಗೊಂಡ ನೌಕರರ ಪ್ರಕರಣ ಮಂಗಳವಾರ ಹೈ ಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಪೀಠದ ಮುಂದೆ ವಿಚಾರಣೆ ನಡೆಯಿತು.
ವಿಚಾರಣೆ ವೇಳೆ ಸಾರಿಗೆ ನೌಕರರ ಪರ ವಕೀಲರು ಮತ್ತು ಕೆಎಸ್‌ಆರ್‌ಟಿಸಿ ಪರ ವಕೀಲರು ಮುಖ್ಯನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ಸೂರಜ್ ಗೋವಿಂದರಾಜ್ ಅವರ ನ್ಯಾಯಪೀಠದ ಮುಂದೆ ವಾದ ಮಂಡಿಸಿದರು.
ಎರಡೂ ಕಡೆ ವಕೀಲರ ವಾದ ಪ್ರತಿವಾದವನ್ನು ಆಲಿಸಿದ ಮುಖ್ಯನ್ಯಾಯಮೂರ್ತಿಗಳನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ಈ ಪ್ರಕರಣದ ಅರ್ಜಿಗಳನ್ನು ಆ.27ಕ್ಕೆ ಮುಂದೂಡಿತು.
ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ: 7ಮಂದಿಗೆ ಹೈ ಕೋರ್ಟ್ ನೋಟಿಸ್
ಬಿಎಸ್‌ವೈ ಬರೀ ತಿಥಿ ಊಟ ಮಾಡಿದವರು- ಮದುವೆ ಊಟ ಮಾಡೇ ಇಲ್ಲ: ಕುಟುಕಿದ ಸಿದ್ದರಾಮಯ್ಯ