Breaking NewsNEWSನಮ್ಮರಾಜ್ಯರಾಜಕೀಯ

ನೂತನ ಸಚಿವರ ಪಟ್ಟಿ ಇಂದು 11.30ರೊಳಗೆ ರಾಜಭವನದಿಂದ ಬಿಡುಗಡೆ: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತೆಂಬ ಬಗ್ಗೆ ಕುತೂಹಲ ಹೆಚ್ಚಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಇನ್ನೂ ಗುಟ್ಟು ಬಿಟ್ಟು ಕೊಟ್ಟಿಲ್ಲ. ಹೀಗಾಗಿ ಸಚಿವಾಕಾಂಕ್ಷಿಗಳು ಕರೆ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಕೆಲ ಶಾಸಕರು ಸಚಿವ ಸ್ಥಾನ ಕೊಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ.

ಇನ್ನು ರಾಜಭವನದಿಂದ ಬೆಳಗ್ಗೆ 11.30ರ ಒಳಗೆ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಸಂಭಾವ್ಯ ಸಚಿವರ ಹೆಸರುಗಳು ಕೇಳಿಬರುತ್ತಿವೆ. ಹೀಗಾಗಿ ನಾನು ಈಗ ಹೇಳುವುದಿಲ್ಲ. ರಾಜಭವನದಿಂದಲೇ ಬಿಡುಗಡೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನೂತನ ಸಚಿವರ ಪಟ್ಟಿಯನ್ನು ರಾಜಭವನಕ್ಕೆ 11 ಗಂಟೆಯ ಹೊತ್ತಿಗೆ ನೀಡಲಾಗುತ್ತದೆ. ಬಳಿಕ ಕೆಲವೇ ಕ್ಷಣಗಳಲ್ಲಿ ರಾಜಭವನದಿಂದ ಅಧಿಕೃತ ಪಟ್ಟಿ ಹೊರಬೀಳಲಿದೆ. ಅಪರಾಹ್ನ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನ ರಾಜಭವನದ ಗಾಜಿನ ಮನೆಯಲ್ಲಿ ನೆರವೇರಲಿದೆ ಎಂದರು.

ಇನ್ನು ನಿನ್ನೆ ಸಂಜೆ ಫೈನಲ್‌ ಆದ ಸಚಿವ ಪಟ್ಟಿಯಲ್ಲಿ ಗೋವಿಂದ ಕಾರಜೋಳ, ಎಸ್‌.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ಬೈರತಿ ಬಸವರಾಜ್, ಉಮೇಶ್ ಕತ್ತಿ, ಪೂರ್ಣಿಮಾ ಶ್ರೀನಿವಾಸ್, ಡಾ.ಸಿ.ಎನ್.ಅಶ್ವತ್ಥ್‌ನಾರಾಯಣ್, ಡಾ.ಕೆ.ಸುಧಾಕರ್, ಕೆ.ಎಸ್.ಈಶ್ವರಪ್ಪ, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಅರಗ ಜ್ಞಾನೇಂದ್ರ, ಆನಂದ್ ಸಿಂಗ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ, ಕೆ.ಸಿ.ನಾರಾಯಣ ಗೌಡ, ಪ್ರಭುಚೌಹಾನ್, ಕೆ.ಗೋಪಾಲಯ್ಯ ಅವರ ಹೆಸರು ಇರುವುದಾಗಿ ತಿಳಿದು ಬಂದಿದೆ.

ಈಗಾಗಲೇ ಇವರೆಲ್ಲರಿಗೂ ವಿಧಾನಸೌಧಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳು ಕರೆ ಮಾಡಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಸಿ.ಪಿ.ಯೋಗೇಶ್ವರ್, ಅರವಿಂದ ಬೆಲ್ಲದ್, ಶಶಿಕಲಾ ಜೊಲ್ಲೆ, ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಗುವುದು ಸಂಶಯವಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು