NEWSನಮ್ಮರಾಜ್ಯರಾಜಕೀಯ

ರಾಜಕೀಯದಲ್ಲಿ ಏಳು-ಬೀಳುಗಳು ಸಹಜ: ನಿರಾಸೆಯ ಮಾತನಾಡಿದ ಸಿಪಿವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಚಿವ ಸ್ಥಾನ ನೀಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟ ನಿರ್ಧಾರ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ದೆಹಲಿಯಿಂದ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾದ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಚಿವ ಸ್ಥಾನ ನೀಡಿದರೆ ಸವನಾಗಿ ಕೆಲಸ ಮಾಡುತ್ತೇನೆ, ಇಲ್ಲದಿದ್ದರೆ ಒಬ್ಬ ಕಾರ್ಯಕರ್ತನಾಗಿ ನಾಡಬೇಕಾದ ಕೆಲಸದಲ್ಲಿ ಮುಂದುವರಿಯುತ್ತೇನೆ ಎಂದರು.

ಹಿಂದಿನ ಯಡಿಯೂರಪ್ಪ ಸರ್ಕಾರದ ವಿರುದ್ಧ ಬಂಡಾಯವೆದ್ದು ಸುದ್ದಿಯಾಗಿದ್ದ ಯೋಗೇಶ್ವರ್ ಸಚಿವ ಸ್ಥಾನ ಪಡೆಯಬೇಕು ಎಂಬ ದೃಷ್ಟಿಯಿಂದ ದೆಹಲಿಗೆ ಹೋಗಿದ್ದರು. ಇಂದು ವಾಪಸ್‌ ಆಗಿರುವ ಅವರು ಸಚಿವ ಸ್ಥಾನದ ಬಗ್ಗೆ ನನಗೆ ಏನೂ ಮಾಹಿತಿಯಿಲ್ಲ, ನನಗೆ ಯಾರಿಂದಲೂ ಕರೆ ಬಂದಿಲ್ಲ, ನೋಡೋಣ ಮುಂದೆ ಏನಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದರು.

ರಾಜಕೀಯದಲ್ಲಿ ಏಳು-ಬೀಳುಗಳು ಸಹಜ, ಹಲವು ಏಳು-ಬೀಳುಗಳನ್ನು ಜೀವನದಲ್ಲಿ ಕಂಡಿದ್ದೇನೆ ಮತ್ತು ಅನುಭವಿಸಿದ್ದೇನೆ. ರಾಜಕೀಯ ಎಂದಮೇಲೆ ಇದೆಲ್ಲ ಸಹಜವಲ್ಲವೇ ಎಂದು ನಿರಾಸೆಯಿಂದಲೇ ಹೇಳಿದರು.

ನೂತನ ಸಚಿವರ ಪಟ್ಟಿ ಇಂದು 11.30ರೊಳಗೆ ರಾಜಭವನದಿಂದ ಬಿಡುಗಡೆ: ಸಿಎಂ

ಸಾರಿಗೆ ನೌಕರರ ಪ್ರಕರಣ: ಆ.27ಕ್ಕೆ ಮುಂದೂಡಿದ ಹೈ ಕೋರ್ಟ್‌

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...