NEWSನಮ್ಮರಾಜ್ಯರಾಜಕೀಯ

ಸಚಿವಸ್ಥಾನ ಸಿಗದ ಅಸಮಾಧಾನದಿಂದಲೇ ಟಾಂಗ್‌ ಕೊಟ್ಟ ಶಾಸಕ ಎಸ್.ಎ.ರಾಮದಾಸ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವ ಸರ್ಕಾರದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಮೈಸೂರು ಶಾಸಕ ಎಸ್.ಎ. ರಾಮದಾಸ್ ಅಸಮಾಧಾನಗೊಂಡಿದ್ದು, ಟಾಂಗ್ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು. ಕರ್ನಾಟಕವನ್ನು ದೇಶದಲ್ಲಿ ನಂ.1 ಮಾಡಲು ತಾವೆಲ್ಲ ಶ್ರಮಿಸುತ್ತೀರೆಂದು ನಂಬಿರುತ್ತೇನೆ.

ತಮ್ಮೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಶುಭವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವಲಸಿಗರಿಗೆ ಮಣೆಯಾಕಿರುವ ಬಗ್ಗೆ ನೋವಿನಿಂದ ಬರೆದುಕೊಂಡಿದ್ದಾರೆ.

ಇನ್ನು ಇತ್ತ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಮಾಜಿ ಸಚಿವ ಎಸ್‌.ಸುರೇಶ್ ಕುಮಾರ್ ಕೂಡ ಟ್ವೀಟ್ ಮಾಡುವ ಮೂಲಕ ಭಾವುಕರಾಗಿದ್ದಾರೆ. ಈ ಸಂಬಂಧ ತಮ್ಮ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಮಾಜಿ ಸಚಿವರು, ‘ಕಳೆದ 2 ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸುರೇಶ್ ಕುಮಾರ್ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಇದೀಗ ಬೊಮ್ಮಾಯಿ ಸರ್ಕಾರದ ಸಚಿವರ ಪಟ್ಟಿಯಲ್ಲಿಅವರ ಹೆಸರು ಕೈ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರು ಅಸಮಾಧಾನಗೊಂಡಿದ್ದಾರೆ.

ಇನ್ನು ಸುರೇಶ್ ಕುಮಾರ್ ಜತೆಗೆ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿ.ಪಿ.ಯೋಗೇಶ್ವರ್, ಆರ್. ಶಂಕರ್ ಹಾಗೂ ಶ್ರೀಮಂತ ಪಾಟೀಲ್ ಇವರ ಹೆಸರನ್ನೂ ಕೂಡ ಕೈ ಬಿಡಲಾಗಿದ್ದು ಅವರಲ್ಲಿ ಜಗದೀಶ್ ಶೆಟ್ಟರ್ ನಾನು ಸಚಿವನಾಗುವುದಿಲ್ಲ ಎಂದು ಈಗಾಗಲೇ ಹೇಳಿಕೆ ನೀಡಿದ್ದರು. ಇನ್ನು ಉಳಿದವರು ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು.

ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟ ಸೇರುವ 29 ಶಾಸಕರ ಹೆಸರು ಬಹಿರಂಗ

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...