CrimeNEWSನಮ್ಮರಾಜ್ಯರಾಜಕೀಯ

ಜಮೀರ್ ಅಹ್ಮದ್ ನಿವಾಸದ ಮೇಲೆ ಬೆಳಂಬೆಳಗ್ಗೆ ಐಟಿ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಬೆಳಂಬೆಳಗ್ಗೆ ಐಟಿ ದಾಳಿ ನಡೆದಿದ್ದು, ಜಮೀರ್ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದಡಿ ಬೆಂಗಳೂರಿನ ನಿವಾಸ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮತ್ತು ಫ್ಲ್ಯಾಟ್ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜಮೀರ್ ಅವರ ಬೆಂಗಳೂರಿ ಕಟೋಂನ್ಮೆಂಟ್ ರೈಲ್ವೇ ನಿಲ್ದಾಣದ ಬಳಿಯ ಹೊಸ ನಿವಾಸ ಮತ್ತು ಕಲಾಸಿಪಾಳ್ಯದಲ್ಲಿರುವ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಜಮೀರ್ ಅಹ್ಮದ್ ನಿವಾಸದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಏಕಕಾಲದಲ್ಲಿ ಜಮೀರ್ ಅಹ್ಮದ್ ಅವರಿಗೆ ಸಂಬಂಧಿಸಿದ ನಿವಾಸ, ಕಚೇರಿ, ಫ್ಲ್ಯಾಟ್ ಮೇಲೆ 50 ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ರಿಚ್ಮಂಡ್​ ಟೌನ್​ನ ಖಾಸಗಿ ಹೋಟೆಲಿನಲ್ಲಿ ಎರಡು ದಿನಗಳಿಂದ ತಂಗಿದ್ದ ಐಟಿ ಅಧಿಕಾರಿಗಳು 25 ಇನ್ನೋವಾ ಕಾರುಗಳಲ್ಲಿ ಇಂದು ಬೆಳಗಿನ ಜಾವ 5 ಗಂಟೆಗೆ ದಾಳಿ ನಡೆಸಿದ್ದಾರೆ. ತದನಂತರ, ಬೆಂಗಳೂರಿನ ಇತರೆ ಐಟಿ ಅಧಿಕಾರಿಗಳೂ ಇವರಿಗೆ ಕೈಜೋಡಿಸಿದ್ದಾರೆ.

ಐಟಿ ದಾಳಿ ಇಂದು ಮತ್ತು ನಾಳೆಯೂ ನಡೆಯುವ ಅಂದಾಜಿದೆ. ಈ ಮಧ್ಯೆ ಬೆಂಗಳೂರು ಪೊಲೀಸರು ಐಟಿ ಅಧಿಕಾರಿಗಳಿಗೆ ಸಾಥ್​ ನೀಡಿದ್ದು, ಭಾರೀ ಪ್ರಮಾಣದಲ್ಲಿ ಬಿಗಿ ಬಂದೋಬಸ್​ ಮಾಡಲಾಗಿದೆ. ಭದ್ರತೆಗೆ 200ಕ್ಕೂ ಹೆಚ್ಚು CRPF ಪೊಲೀಸರ ನಿಯೋಜನೆ ಮಾಡಲಾಗಿದೆ

ಇನ್ನು, ಜಮೀರ್ ಸಾಮ್ರಾಜ್ಯದ ಮೇಲೆ ಐಟಿ ದಾಳಿ ನಡೆದಿದ್ದು, ಆದಾಯ ತೆರಿಗೆ ಪಾವತಿ ವೇಳೆ ಭಾರೀ ದೊಡ್ಡ ವ್ಯತ್ಯಾಸ ಕಂಡು ಬರುತ್ತಿತ್ತು. ಕಳೆದರಡು ವರ್ಷದಿಂದ ತೆರಿಗೆ ಸರಿಯಾಗಿ ಪಾವತಿ ಮಾಡಿರಲಿಲ್ಲ ಎನ್ನಲಾಗ್ತಿದೆ. ಗಳಿಸಿದ ಆದಾಯಕ್ಕೂ, ಕಟ್ಟುತ್ತಿದ್ದ ತೆರಿಗೆಗೂ ಭಾರೀ ವ್ಯತ್ಯಾಸವಿತ್ತು. ಈ ಹಿನ್ನೆಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಕೆ ಆರ್​ ಮಾರ್ಕೆಟ್‌ನಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿಯ ಮೇಲೂ ಐಟಿ ದಾಳಿ ನಡೆದಿದ್ದು, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಐಟಿ ಅಧಿಕಾರಿಗಳು ದೊಡ್ಡ ಮಟ್ಟದ ಶಾಕ್ ನೀಡಿದ್ದಾರೆ. ಟ್ರಾವೆಲ್ಸ್ ಕಚೇರಿಯಲ್ಲಿ 6 ಮಂದಿ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ. ಇನ್ನು, ನ್ಯಾಷನಲ್ ಟ್ರಾವೆಲ್ಸ್ ಕಚೇರಿಯೊಳಗೆ 5 ಮಂದಿ ಸಿಬ್ಬಂದಿ ಇದ್ದಾರೆ.

2018ರ ಚುನಾವಣಾ ನಾಮಪತ್ರದಲ್ಲಿ ಜಮೀರ್ ಘೋಷಿಯಿಕೊಂಡಿದ್ದ ಆಸ್ತಿಪಾಸ್ತಿ: ಕಳೆದ ಬಾರಿ ಚುನಾವಣೆ ಆಯೋಗಕ್ಕೆ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮ್ಮದ್ ಖಾನ್ ಸುಮಾರು 40 ಕೋಟಿ ರೂಪಾಯಿ ಆಸ್ತಿ ಘೋಷಣೆ ಮಾಡಿದ್ದರು. ಜಮೀರ್ ಅಧಿಕೃತವಾಗಿ 40,34,43,699 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ.

ವರ್ಷಕ್ಕೆ ಸುಮಾರು 26 ಲಕ್ಷ ರೂಪಾಯಿ ಆದಾಯ ಅಂತಾ ತೋರಿಸಿದ್ದ ಜಮೀರ್. 2011ರ ಮಾಡೆಲ್ ನ ಒಂದೇ ಒಂದು ಬೆಂಜ್ ಕಾರು ಇದೆ ಅಂತಾ ಮಾಹಿತಿ ನೀಡಿದ್ದರು. ಜಮೀರ್ ಹತ್ತಿರ 50 ಗ್ರಾಂ ಚಿನ್ನಾಭರಣ, ಜಮೀರ್ ಪತ್ನಿ ಬಳಿ ಕಾಲು ಕೆಜಿ ಚಿನ್ನಾಭರಣ, ಕಾಲು ಕೆಜಿ ಬೆಳ್ಳಿ ಆಭರಣ. ಸದಾಶಿವನಗರದಲ್ಲಿ ಸುಮಾರು 4.5 ಸಾವಿರ ಚದರ ಅಡಿ ಫ್ಲಾಟ್, ರಿಚ್ಮಂಡ್ ಟೌನ್ ನಲ್ಲಿ ಕೋಟ್ಯಂತರ ಮೌಲ್ಯದ ಸುಮಾರು 15 ಸಾವಿರ ಚದರ ಅಡಿ ಹಾಗೂ 33 ಸಾವಿರ ಚದರ ಅಡಿ ಜಮೀನು ಇದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು