NEWSಕ್ರೀಡೆದೇಶ-ವಿದೇಶವಿದೇಶ

ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ: ಕುಸ್ತಿಯಲ್ಲಿ ಪದಕ ಗೆದ್ದ ರವಿ ದಹಿಯಾ

ವಿಜಯಪಥ ಸಮಗ್ರ ಸುದ್ದಿ

ಟೋಕಿಯೋ: ಒಲಿಂಪಿಕ್ಸ್ ಕುಸ್ತಿಯ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 23 ವರ್ಷದ ರವಿ ದಹಿಯಾ ಬೆಳ್ಳಿಯನ್ನು ಗೆದ್ದಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಎರಡನೇ ಬೆಳ್ಳಿ ಪದಕವನ್ನು ಗೆದ್ದಂತಾಗಿದೆ.

ಇಂದು ಚಿನ್ನಕ್ಕಾಗಿ ರವಿ ದಹಿಯಾ ಆರ್‌ಒಸಿಯ ಜಾವೂರ್ ಉಗೆವ್ ವಿರುದ್ಧ ನಡೆದ ಸೆಣೆಸಾಟದಲ್ಲಿ ರವಿ ದಹಿಯಾ 4-7 ಅಂಕಗಳೊಂದಿಗೆ ಉಗೆವ್‌ಗೆ ಶರಣಾದರು.

ಈಗ ಭಾರತಕ್ಕೆ ಎರಡು ಬೆಳ್ಳಿ ಪದಕ ಬಂದಂತಾಗಿದೆ. ಮೀರಾ ಬಾಯಿ ಚಾನು ಮೊದಲಿಗೆ ಬೆಳ್ಳಿ ಪದಕ ಗೆದ್ದಿದ್ದರು. ಇನ್ನು ಕ್ರೀಡಾಕೂಟದಲ್ಲಿ ಭಾರತ ಎರಡು ಬೆಳ್ಳಿ ಮತ್ತು ಮೂರು ಕಂಚು ಸೇರಿ ಒಟ್ಟು ಐದು ಪದಕಗಳನ್ನು ಗೆದ್ದಂತಾಗಿದೆ.

23 ವರ್ಷದ ದಹಿಯಾ ಭಾರತದ ಕಿರಿಯ ಒಲಂಪಿಕ್ ಚಾಂಪಿಯನ್ ಆಗುವ ನಿರೀಕ್ಷೆಯಿತ್ತು. ಆದರೆ ರಷ್ಯನ್ ಆಟಗಾರ ಗೆಲುವು ಸಾಧಿಸಿದ್ದಾರೆ.

2 ಬಾರಿ ವಿಶ್ವಚಾಂಪಿಯನ್ ರಷ್ಯಾದ ಚೌರ್ ಉಗೆವ್ ವಿರುದ್ಧ 7-4 ಅಂಕಗಳಿಂದ ರವಿ ದಹಿಯಾ ಸೋತು ಎರಡನೇ ಸ್ಥಾನವನ್ನು ಪಡೆದರು. ಉಗೆವ್ ಸತತ 16 ಪಂದ್ಯಗಳನ್ನು ಗೆದ್ದು ಒಲಿಂಪಿಕ್ಸ್ ಪ್ರವೇಶಿಸಿದ್ದರು.

ಸೆಮಿಫೈನಲ್‍ನಲ್ಲಿ ಕಝಖಿಸ್ತಾನದ ನುರಿಸ್ಲಾಮ್ ಸನೆವ್ ವಿರುದ್ಧ ಆರಂಭಿಕ ಹಿನ್ನಡೆ ಅನುಭವಿಸಿದರೂ ಭರ್ಜರಿ ಕಮ್‍ಬ್ಯಾಕ್ ಮಾಡುವ ಮೂಲಕ ರವಿ ದಹಿಯಾ ರೋಚಕ ಗೆಲುವಿನೊಂದಿಗೆ ಫೈನಲ್ ಅರ್ಹತೆ ಪಡೆದುಕೊಂಡಿದ್ದರು.

ಹರಿಯಾಣದ ಸೋನಿಪತ್ ಜಿಲ್ಲೆಯ ನಹ್ರಿ ಗ್ರಾಮದಲ್ಲಿ ಜನಿಸಿದ ರವಿ ದಹಿಯಾ ಈ ಹಿಂದೆ 2019ರ ವಿಶ್ವ ಚಾಂಪಿಯನ್‍ಷಿಪ್‍ನ 57 ಕೆಜಿ ವಿಭಾಗದಲ್ಲಿ ಕಂಚು, 2020ರ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಚಿನ್ನ, 2021ರ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಸ್ವರ್ಣ, 2018ರ ಅಂಡರ್ 23 ಚಾಂಪಿಯನ್‍ಷಿಪ್‍ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದರು.

ಕುಸ್ತಿ ಕಮಾಲ್: 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್ ಕುಮಾರ್ ಭಾರತಕ್ಕೆ ಬೆಳ್ಳಿ ಗೆದ್ದುಕೊಟ್ಟಿದ್ದರು. ಅದೇ ವರ್ಷ ಯೋಗೀಶ್ವರ್ ದತ್ ಕಂಚಿನ ಪದಕ ಗೆದ್ದರೆ, 2016ರ ರಿಯೊ ಒಲಿಂಪಿಕ್ಸ್‍ನಲ್ಲಿ ಸಾಕ್ಷಿ ಮಲಿಕ್ ಕಂಚು ಗೆದ್ದಿದ್ದರು. 1952ರಲ್ಲಿ ಕೆ.ಡಿ ಜಾಧವ್ ಕಂಚಿನ ಪದಕ ಗೆದ್ದಿದ್ದರು

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ