CrimeNEWSನಮ್ಮಜಿಲ್ಲೆ

ಫೋನ್‍ನಲ್ಲಿ ಪರಿಚಯವಾದ ಯುವಕನ ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದಾಕೆ ನದಿಗೆ ಹಾರಿ ಆತ್ಮಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾಸನ: ಅಪ್ಪ ಅಮ್ಮ ಒಪ್ಪಿ ನಿಶ್ಚಿತಾರ್ಥ ಮಾಡಿದ್ದ ಹುಡುಗನ ಬಿಟ್ಟು ಫೋನ್‍ನಲ್ಲಿ ಪರಿಚಯವಾಗಿದ್ದ ಯುವಕನನ್ನು ಪ್ರೀತಿಸಿ ಕಳೆದ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದಾಕೆ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ(20) ಆತ್ಮಹತ್ಯೆಗೆ ಮಾಡಿಕೊಂಡವಳು.

ಪೂಜಾಳಿಗೆ ಈ ಹಿಂದೆ ಬೇರೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥವಾಗಿತ್ತು. ಆದರೆ ಫೋನ್‍ನಲ್ಲಿ ಪರಿಚಯವಾಗಿದ್ದ ಸಕಲೇಶಪುರ ಮೂಲದ ದೀಪಕ್‌ ನನ್ನು ಪೂಜಾ ಪ್ರೀತಿಸುತ್ತಿದ್ದಳು. ಹೀಗಾಗಿ ಮನೆಯವರನ್ನು ವಿರೋಧಿಸಿ ದೀಪಕ್ ಜೊತೆ ಓಡಿ ಬಂದಿದ್ದ ಪೂಜಾ, ಕಳೆದ ಮಾರ್ಚ್ 20 ರಂದು ಮದುವೆಯಾಗಿದ್ದಳು.

ಮದುವೆ ನಂತರ ದೀಪಕ್ ಮತ್ತು ಆಕೆಯ ಮನೆಯವರು ನಿತ್ಯವೂ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು. ನಿತ್ಯವೂ ದೈಹಿಕ ಹಲ್ಲೆ ನಡೆಸಿ ಹಿಂಸೆ ನೀಡುತ್ತಿದ್ದರು. ಹೀಗಾಗಿ ಇಂದು ಪೂಜಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೂಜಾ ಪಾಲಕರು ದೀಪಕ್ ವಿರುದ್ಧ ಆರೋಪ ಮಾಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದಾವಿಸಿದ್ದು ಪೂಜಾಳ ಮೃತದೇಹಕ್ಕಾಗಿ ಶೋಧ ನಡೆಸಿದ್ದಾರೆ. ಸ್ಥಳದಲ್ಲಿ ಮೃತ ಪೂಜಾಳ ಪಾಲಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...