NEWSನಮ್ಮರಾಜ್ಯರಾಜಕೀಯ

ಜಮೀರ್ ಬಗ್ಗೆ ಯಾರು ದೂರು ನೀಡಿದ್ದಾರೆಂದು ಇಡಿ ಅವರೇ ಹೇಳಬೇಕು: ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ನನ್ನ ರಾಜಕೀಯ ವಿರೋಧಿಗಳು ನನ್ನ ಬಗ್ಗೆ 3-4 ಕಂಪ್ಲೇಂಟ್ ನೀಡಿದ್ದಾರೆ ಎಂಬ ಹೇಳಿಕೆಯನ್ನು ಶಾಸಕ ಜಮೀರ್ ಅಹ್ಮದ್ ಖಾನ್‍ ನೀಡಿದ್ದರು. ಈ ಬೆನ್ನಲ್ಲೇ ಜಮೀರ್ ಬಗ್ಗೆ ಯಾರು ದೂರು ನೀಡಿದ್ದಾರೆಂದು ಇಡಿ ಅವರೇ ಹೇಳಬೇಕು. ನಾನಂತೂ ಯಾರ ಬಗ್ಗೆ ಕೂಡ ದೂರು ನೀಡಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿ ಬಳಿಯ ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಮನೆ ಬಗ್ಗೆ ಯಾರು ದೂರು ನೀಡಿದ್ದಾರೆಂದು ನನಗೆ ಗೊತ್ತಿಲ್ಲ. ನಾನಂತೂ ಯಾರ ಬಗ್ಗೆಯೂ ದೂರು ನೀಡಿಲ್ಲ. ಯಾರು ದೂರು ಕೊಟ್ಟಿದ್ದಾರೋ ಅವರೇ ಸಮರ್ಥವಾಗಿ ಉತ್ತರ ಕೊಟ್ಟುಕೊಳ್ಳುತ್ತಾರೆ ನಮಗೇಕೆ ಆ ವಿಚಾರ ಬಿಡಿ ಎಂದು ತಿಳಿಸಿದರು.

ಇನ್ನು ಕೇಂದ್ರ ಸರ್ಕಾರಲ್ಲಿರುವಂತಹ ಕೆಲವು ಸಂಸ್ಥೆಗಳು, ಮೂಗರ್ಜಿಗಳನ್ನು ಬರೆದು, ಈ ರೀತಿಯ ಸಂದರ್ಭದಲ್ಲಿ ತನಿಖೆ ಮಾಡಿಕೊಂಡು ಬಂದಿರುವಂತದ್ದು, ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಮ್ಮ ಮೇಲೂ ಹಲವಾರು ಬಾರಿ ತನಿಖೆಯಾಗಿಲ್ವಾ, ಇದೇ ಜಮೀನಿನ ಮೇಲೆ 25 ವರ್ಷ, 30 ವರ್ಷ ನಮಗೆಷ್ಟು ಕಾಟ ನೀಡಿದ್ದಾರೆಂಬುದು ನಮಗೆ ಮಾತ್ರ ಗೊತ್ತು ಎಂದು ಹೇಳಿದರು.

ಇನ್ನು ರಾಜಕೀಯದಲ್ಲಿ ಇರುವಾಗ ಹಲವಾರು ರೀತಿಯ ರಾಜಕೀಯ ತೊಂದರೆಗಳನ್ನು ನಾವು ಅನುಭವಿಸಲೇ ಬೇಕು. ಆದರೆ ನಾವು ಸರಿಯಾಗಿದ್ದರೆ ಯಾರು ಏನೂ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...