NEWSನಮ್ಮರಾಜ್ಯರಾಜಕೀಯ

ಚುನಾವಣೆ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ತಮ್ಮ ಜನ್ಮದಿನದಂದೇ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವ  ಹಾಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಆ.6 (ಇಂದು) ಅವರ ಜನ್ಮದಿನ. ಈ ಹೊತ್ತಲೇ ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ವಯಂ ಘೋಷಣೆ ಮಾಡುವ ಮೂಲಕ ಈ ಮಹತ್ತರ ಹೇಳಿಕೆ ನೀಡಿದ್ದಾರೆ.

ಇನ್ನು ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜ್ಯದಲ್ಲಿ ಅಂದು ಸಂಭವಿಸಿದ ರಾಜಕೀಯ ಬೆಳವಣಿಗೆಗಳು ಬೇರೆ ತಿರುವು ಪಡೆದ ಕಾರಣ ಸ್ಪರ್ಧೆ ಮಾಡಬೇಕಾಯಿತು. ಈಗ ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.

ಕಾಂಗ್ರೆಸ್​ ಪಕ್ಷದಲ್ಲಿ ಸಿದ್ಧರಾಮಯ್ಯ ಹಾಗೂ ಮತ್ತಿತರರೊಂದಿಗೆ ಮನಸ್ತಾಪ ಉಂಟಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ವಿ.ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದರು. ಆ ಗೆಲುವು ಅವರಿಗೆ ಮಹತ್ವದ್ದೂ ಆಗಿತ್ತು. ಆದರೆ, ಇಂದು ಇನ್ನುಮುಂದೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಆತ್ಮತೃಪ್ತಿಯ ನಿವೃತ್ತಿ
ನಾನು ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ. 50 ವರ್ಷದ ನನ್ನ ರಾಜಕೀಯ ಜೀವನದ ಪುಸ್ತಕ ಬಿಡುಗಡೆಯಾಗಲಿದ್ದು, ಅದರಲ್ಲಿ ನನ್ನ ರಾಜಕೀಯ ಜೀವನದ ಎಲ್ಲಾ ಏಳು ಬೀಳು ದಾಖಲಿಸಿದ್ದೇನೆ. ಇನ್ನು ನಿವೃತ್ತಿ ಘೋಷಿಸುತ್ತಲೇ ಇದು ನನ್ನ ಅಂತಿಮ ನಿಲುವು ಎಂಬುದನ್ನೂ ತಿಳಿಸಿರುವ ಶ್ರೀನಿವಾಸ ಪ್ರಸಾದ್, ಯಾವುದೇ ಕಾರಣಕ್ಕೂ ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ‌ ಮಾತಿನಿಂದ ಹಿಂದೆ ಸರಿಯುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಂಸದರ ಮನೆಗೆ ಶಾಸಕ‌ ಮಹೇಶ್ ಭೇಟಿ
ಬಿಎಸ್​ಪಿಯಿಂದ ಉಚ್ಚಾಟಿತಗೊಂಡಿದ್ದ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌ ನಿನ್ನೆಯಷ್ಟೇ ಬಿಜೆಪಿ ಸೇರಿದ್ದು, ಇಂದು ಜಯಲಕ್ಷ್ಮಿಪುರಂನಲ್ಲಿರುವ ಸಂಸದ ಶ್ರೀನಿವಾಸ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...