ಬೆಂಗಳೂರು: ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ ಎಂದು ಸಚಿವ ಎಂಟಿಬಿ ನಾಗರಾಜ್ ಆಕ್ರೋಶ ಹೊರ ಹಾಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಎಂಟಿಬಿ, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಹೇಳಿದ್ದಾರೆ.
ಎಂಟಿಬಿ ನಾಗರಾಜ್‍ಗೆ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆಗಳ ಖಾತೆಯನ್ನು ನೀಡಲಾಗಿದೆ. ಇದಕ್ಕಾಗಿ ಎಂಟಿಬಿ ಆಕ್ರೋಶ ಹೊರ ಹಾಕಿದ್ದಾರೆ. ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ನೀಡಿದ್ದಕ್ಕೆ ಆನಂದ್ ಸಿಂಗ್ ಸಹ ಅಸಮಾಧಾನಗೊಂಡಿದ್ದಾರೆ.
ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹOಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ. @BSYBJP @BSBommai @BJP4Karnataka #MTB
— N.Nagaraj (MTB) (@MtbNagaraju) August 7, 2021