NEWSಕ್ರೀಡೆದೇಶ-ವಿದೇಶ

ಒಲಂಪಿಕ್ಸ್ ಕ್ರೀಡಾಕೂಟ: ಜಾವೆಲಿನ್ ಥ್ರೋನಲ್ಲಿ ಚಿನ್ನ ಬೇಟೆಯಾಡಿದ ನೀರಜ್ ಚೋಪ್ರಾ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಟೋಕಿಯೋ: ಒಲಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತ ನೀರಜ್ ಚೋಪ್ರಾ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಡುವ ಮೂಲಕ ಶತಕೋಟಿ ಭಾರತೀಯರ ಕನಸು ನನಸಾಗಿದ್ದಾರೆ. ಈ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ.

ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನಕ್ಕೆ ಗುರಿಯಿಟ್ಟರು. ಇಲ್ಲಿಯವರೆಗೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತ ಯಾವುದೇ ಪದಕ ಗೆದ್ದಿರಲಿಲ್ಲ. ಈಗ ನಿರಾಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ‌.

2008ರ ಬೀಜಿಂಗ್ ಒಲಿಂಪಿಕ್ಸ್ ಶೂಟಿಂಗ್ ಸ್ಪರ್ಧೆಯಲ್ಲಿ ಅಭಿನವ್ ಬಿಂದ್ರಾ ಚಿನ್ನ ಗೆದ್ದಿದ್ದರು. ಇದೀಗ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದ ಎರಡನೇ ಆಟಗಾರನಾಗಿ ನೀರಜ್ ಚೋಪ್ರಾ ಹೊರಹೊಮ್ಮಿದ್ದಾರೆ.

ಜಾವೆಲಿನ್‌ ಥ್ರೋ ಪುರುಷರ ವಿಭಾಗದ ಫೈನಲ್‌ಗೆ ಅರ್ಹತೆ ಪಡೆಯಲು ಕನಿಷ್ಠ 83.50 ಮೀಟರ್‌ ಜಾವೆಲಿನ್ ಎಸೆಯಬೇಕು ಅಥವಾ ಅರ್ಹತಾ ಸುತ್ತಿನಲ್ಲಿ ಉತ್ತಮ ಪ್ರದರ್ಶನ ತೋರಿದ ಅಗ್ರ 12 ಜಾವೆಲಿನ್‌ ಥ್ರೋ ಪಟುಗಳನ್ನು ಆರಿಸಲಾಗುತ್ತದೆ.

ನೀರಜ್‌ ಚೋಪ್ರಾ ಗುಂಪು ‘ಎ’ ಹಂತದ ಅರ್ಹತಾ ಸುತ್ತಿನಲ್ಲಿ 15ನೇ ಸ್ಥಾನದಲ್ಲಿದ್ದರು. ಆದರೆ ತನ್ನ ಮೊದಲ ಪ್ರಯತ್ನದಲ್ಲಿಯೇ ನೀರಜ್‌ 86.59 ಮೀ. ದೂರಕ್ಕೆ ಜಾವೆಲಿನ್‌ ಎಸೆದು ಅಗ್ರಸ್ಥಾನ ಪಡೆದಿದ್ದರು. ಫೈನಲ್‌ನಲ್ಲೂ ಅವರು ತಮ್ಮ ಈ ಲಯವನ್ನೇ ಮುಂದುವರಿಸಲಿ ಎಂದು ಶತಕೋಟಿ ಭಾರತೀಯರು ಪ್ರಾರ್ಥಿಸಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ