NEWSನಮ್ಮಜಿಲ್ಲೆರಾಜಕೀಯ

ನಾನು ಕೂಡ ರಾಜಕಾರಣ ಮಾಡಲು ಬಂದಿರುವವನು: ಸಿಎಂಗೇ ಟಾಂಗ್‌ ಕೊಟ್ಟ ಪ್ರೀತಂ ಗೌಡ

ವಿಜಯಪಥ ಸಮಗ್ರ ಸುದ್ದಿ

ಹಾಸನ: ನೀವು ಹೊಂದಾಣಿಕೆ ರಾಜಕೀಯ ಮಾಡಿಕೊಂಡು ಕುಳಿತರೆ ಪಕ್ಷದ ಶಾಸಕರು, ಕಾರ್ಯಕರ್ತರಿಗೆ ಏನು ಸಂದೇಶ ನೀಡಲು ಹೊರಟಿದ್ದೀರಿ ಎಂದು ತಮ್ಮ ಅಸಮಾಧಾನವನ್ನು ಶಾಸಕ ಪ್ರೀತಂಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇವೇಗೌಡರ ಮನೆಗೆ ಭೇಟಿ ನೀಡಿದ ಸಂದರ್ಭವನ್ನು ಪ್ರಸ್ತಾಪಿಸುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಳೆ ಮೈಸೂರು, ಹಾಸನ ಮತ್ತು ರಾಜ್ಯದ ಇತರ ಭಾಗದ ಬಿಜೆಪಿ ಕಾರ್ಯಕರ್ತರಿಗೆ ಮಾನಸಿಕವಾಗಿ ಸ್ಥೈರ್ಯ ತುಂಬುವುದನ್ನು ಬಿಟ್ಟು ಈ ರೀತಿ ನಡೆದುಕೊಂಡರೆ ಹೇಗೆ ಎಂದು ಸಿಎಂ ಅವರನ್ನೇ ಪ್ರಶ್ನಿಸಿದ್ದಾರೆ.

ಬಸವರಾಜ ಬೊಮ್ಮಾಯಿಯವರ ತಂದೆ ಎಸ್.ಆರ್. ಬೊಮ್ಮಾಯಿಯವರ ಸರ್ಕಾರವನ್ನು ಉರುಳಿಸಿದವರು ಮಾಜಿ ಪ್ರಧಾನಿ ದೇವೇಗೌಡರು, ಅವರ ಮನೆಗೆ ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲು ಏಕೆ ಹೋಗಬೇಕಿತ್ತು? ಅವರ ಮನೆಗೆ ಹೋಗುವ ಬದಲು ಸಿದ್ದಗಂಗಾ ಶ್ರೀಗಳೋ, ಸುತ್ತೂರು ಮಠದ ಶ್ರೀಗಳೋ, ಆದಿಚುಂಚನಗಿರಿ ಮಠಕ್ಕೋ ಭೇಟಿ ನೀಡಿ ಆಶೀರ್ವಾದ ತೆಗೆದುಕೊಳ್ಳಬೇಕಿತ್ತು.

ಅದು ಬಿಟ್ಟು ಅವರ ತಂದೆಯವರ ಸರ್ಕಾರವನ್ನು ಉರುಳಿಸಿದವರ ಮನೆಗೆ ಹೋಗುವ ಅವಶ್ಯಕತೆಯೇನಿತ್ತು? ಈ ಬಗ್ಗೆ ಬೊಮ್ಮಾಯಿ ಅಭಿಮಾನಿಗಳೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ನಾನು ಯಾವುದೇ ಮುಲಾಜಿಗೆ ಒಳಗಾಗಿ ರಾಜಕಾರಣ ಮಾಡುವಂಥವನಲ್ಲ, ನಮ್ಮ ಮನೆಗೆ ಕಲ್ಲು ಹೊಡೆದ ಸಂದರ್ಭದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಆರ್.ಅಶೋಕ್ ಅವರು ಮಾನಸಿಕವಾಗಿ, ನೈತಿಕವಾಗಿ ಧೈರ್ಯ ತುಂಬಿ ಹೆಚ್ಚು ಶಕ್ತಿ ಕೊಟ್ಟರು ಅಂಥ ನಾಯಕರ ಮಧ್ಯೆ ಬೆಳೆದು ಬಂದಿದ್ದೇನೆ ಎಂದರು.

ಇನ್ನು ನಾವಿಲ್ಲಿ ದಿನ ಬೆಳಗ್ಗೆದ್ದು ಜಾತ್ಯತೀತ ಜನತಾದಳದೊಂದಿಗೆ ಗುದ್ದಾಡಿ ಪಕ್ಷ ಕಟ್ಟುವುದು, ಇನ್ನೊಬ್ಬರು ಹೋಗಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುವುದು. ನಾವ್ಯಾರೂ ಕೂಡ ರಾಜಕೀಯದಲ್ಲಿ ಸನ್ಯಾಸಿಗಳಲ್ಲ. ನಾನು ಕೂಡ ರಾಜಕಾರಣ ಮಾಡಲು ಬಂದಿರುವವನು ಎಂದು ಸಿಎಂಗೆ ಖಾರವಾಗಿ ಹೇಳಿದರು.

ಹಾಸನ ಜಿಲ್ಲೆಯಾಗಿರಬಹುದು, ಹಳೆ ಮೈಸೂರು ಭಾಗವಾಗಿರಬಹುದು ಯಾವುದೇ ಹೊಂದಾಣಿಕೆ ರಾಜಕಾರಣ ಸಾಧ್ಯವಿಲ್ಲ. ಈ ಮೂಲಕ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಬೇಡಿ ಎಂದು ಸಿಎಂ ಬೊಮ್ಮಾಯಿ ಅವರಿಗೇ ಟಾಂಗ್ ಕೊಟ್ಟರು.

ನಮ್ಮ ಕಾರ್ಯಕರ್ತರು ಕೇಳುತ್ತಿರುವ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಸಿಎಂ, ರಾಜ್ಯಾಧ್ಯಕ್ಷರು, ನಮ್ಮ ಸಂಘ ಪರಿವಾರದ ಹಿರಿಯರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ, ಮುಂದಿನ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಜನತಾದಳವನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಈ ಬಗ್ಗೆ ನಮಗೆ ಸ್ಪಷ್ಟ ಉತ್ತರ ಸಿಗಬೇಕು ಎಂದು ಹೇಳಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು