NEWSನಮ್ಮರಾಜ್ಯರಾಜಕೀಯ

ಎಲ್ಲರಿಗೂ ಅವರವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ: ಕ್ಯಾತೆ ತೆಗೆದವರಿಗೆ ಸಿಎಂ ಖಡಕ್‌ ಸಂದೇಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಖಾತೆ ಹಂಚಿಕೆ ಬಗ್ಗೆ ಕ್ಯಾತೆ ತೆಗೆದ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್  ತಿರುಗೇಟು ನೀಡಿದ್ದಾರೆ.

ಸಚಿವ ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನೆಲೆಯಲ್ಲಿ ತಮಗೆ ನೀಡಿರುವ ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಈ ಮೂಲಕ ಎಚ್ಚರಿಕೆ ನೀಡಿದ್ದು, ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲೇ ಇದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಚಿವ ಸ್ಥಾನ ನೀಡಲು ಮತ್ತು ಅವರು ಬಯಸಿದ ಖಾತೆಗಳನ್ನು ನೀಡಲು ಸಾಧ್ಯವಿಲ್ಲ. ಖಾತೆ ಬಗ್ಗೆ ಗೊಂದಲವಿದ್ದರೆ ಈ ಬಗ್ಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದರು.

ಈ ಹಿಂದೆ ಖಾತೆ ಹಂಚಿಕೆ ವಿಚಾರವಾಗಿ ಸಚಿವ ಆನಂದ್ ಸಿಂಗ್ ಅವರ ಹೇಳಿಕೆ ಕುರಿತು ಮಾತನಾಡಿದ ಸಿಎಂ, ‘ಪ್ರತಿಯೊಬ್ಬರೂ ತಮಗೆ ಬೇಕಾದ ಖಾತೆಗಳನ್ನು ಪಡೆಯಲು ಸಾಧ್ಯವಿಲ್ಲ. ಸಚಿವ ಆನಂದ್ ಸಿಂಗ್ ನನಗೆ ಹತ್ತಿರವಾಗಿದ್ದಾರೆ. ಹಾಗಾಗಿ ಎಲ್ಲವೂ ಚೆನ್ನಾಗಿರುತ್ತದೆ. ನಾನು ಅವರನ್ನು ಕರೆದು ಮಾತನಾಡಿದೆ. ನಾನು ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದರು.

ನೂತನ ಸಚಿವ ಆನಂದ್ ಸಿಂಗ್ ಅವರಿಗೆ ಅರಣ್ಯ, ಪರಿಸರ ಮತ್ತು ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ. ಈ ಕುರಿತು ಮಾತನಾಡಿದ್ದ ಆನಂದ್ ಸಿಂಗ್ ಅವರು, “ನಾನು ಈ ಖಾತೆಯನ್ನು ಕೇಳಿಲ್ಲ. ಪಕ್ಷದ ವೇದಿಕೆಯಲ್ಲಿ ನಾನು ಮಾಡಿದ ಯಾವುದೇ ವಿನಂತಿಯನ್ನು ಪರಿಗಣಿಸಲಾಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಭೇಟಿ ಮಾಡಲು ನಾನು ಯೋಜಿಸುತ್ತಿದ್ದೇನೆ . ನನ್ನ ವಿನಂತಿಯನ್ನು ಮರುಪರಿಶೀಲಿಸುವಂತೆ ನಾನು ವಿನಂತಿಸುತ್ತೇನೆ ಎಂದು ಹೇಳಿದ್ದರು.

ಇವರಲ್ಲೇ ಇನ್ನು ಕೆಲ ಸಚಿವರು ತಮಗೆ ನೀಡಿರುವ ಖಾತೆಗಳ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಖಡಕ್‌ ಸಂದೇಶವನ್ನು ಸಿಎಂ ರವಾನಿಸಿದ್ದು, ಕೊಟ್ಟಿರುವ ಖಾತೆಗಳನ್ನು ಜವಾಬ್ದಾರಿಯಿಂದ ನಿಭಾಯಿಸಬೇಕು ಎಂದು ಪರೋಕ್ಷವಾಗಿ ತಾಕೀತು ಮಾಡಿದ್ದಾರೆ.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ