CrimeNEWSನಮ್ಮಜಿಲ್ಲೆ

ಬಿಜೆಪಿ ಶಾಸಕ ರಾಮದಾಸ್‌ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್‌ ಸೂಚನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು:   ಮಳಲವಾಡಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಸ್.ಎ ರಾಮ​ದಾಸ್ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ರಾಮದಾಸ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.

2008ರಲ್ಲಿ ಭೂ ಹಗರಣ ಸಂಬಂಧ ಶಾಸಕ ರಾಮದಾಸ್ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ಪೊಲೀಸರು ಬಿ ರಿಪೋಟ್೯ ಸಲ್ಲಿಸಿದ್ದರು. ವರದಿಯನ್ನು ಕೆಳ ನ್ಯಾಯಾಲಯ ಅಂಗೀಕರಿಸಿತ್ತು‌. ಕೆಳ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆಕ್ಷೇಪಣಾ ಅರ್ಜಿ ಸಲ್ಲಿಸಿದರು.

ಅಷ್ಟರಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದ ರಾಮ​​​​ದಾಸ್ ಅವರ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಗೆ ವರ್ಗಾವಣೆಯಾಗಿತ್ತು. 2019ರಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ವಿಶೇಷ ಕೋರ್ಟ್ ಆದೇಶಿಸಿತ್ತು. ಆದರೆ, ವಿಶೇಷ ಕೋರ್ಟ್​ನ ಆದೇಶ ಪ್ರಶ್ನಿಸಿ ರಾಮದಾಸ್ ಹೈಕೋರ್ಟ್​​ನಿಂದ ತಡೆಯಾಜ್ಞೆ ತಂದಿದ್ದರು.

ಇತ್ತೀಚೆಗೆ ರಾಮದಾಸ್ ಅರ್ಜಿಯನ್ನು ವಜಾ ಮಾಡಿ, ಹೈಕೋರ್ಟ್​​ ತಡೆಯಾಜ್ಞೆಯನ್ನು ತೆರವು ಮಾಡಿತ್ತು. ಮತ್ತೆ ವಿಚಾರಣೆ ಮುಂದುವರಿಸಿದ ವಿಶೇಷ ಕೋರ್ಟ್​ರಾಮ​ದಾಸ್ ವಿರುದ್ಧ ಐಪಿಸಿ 420, 468 ಅಡಿ ಕೇಸ್ ದಾಖಲಿಸಲು ಕೋರ್ಟ್ ಸೂಚನೆ ನೀಡಿದೆ.

1994ರಲ್ಲಿ ಅಂದಿನ‌ ಮೈಸೂರು ಡಿಸಿಯಾಗಿದ್ದ ತ.ಮ. ವಿಜಯಭಾಸ್ಕರ್ ಅವರು ಭೂಹಗರಣದ ಬಗ್ಗೆ ತನಿಖೆ ನಡೆಸಿ ರಾಮದಾಸ್ ವಿರುದ್ಧ ವರದಿ ಸಲ್ಲಿಸಿದ್ದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ