ಬೆಂಗಳೂರು: ಕರ್ನಾಟಕ ಎಸ್ಸೆಸ್ಸೆಲ್ಸಿ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ ಶೇ.99.99 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯಾದ್ಯಂತ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದು, ಈ ಪೈಕಿ ವಿದ್ಯಾರ್ಥಿನಿಯೊಬ್ಬಳನ್ನು ಹೊರತು ಪಡಿಸಿ ಉಳಿದ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಒಟ್ಟು 8,71,443 ಮಕ್ಕಳು ಪರೀಕ್ಷೆ ಬರೆದಿದ್ದು, 8,71,442 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಂಪ್ಯೂಟರ್ ಮೌಲ್ಯಮಾಪನ ಮಾಡಲಾಗಿದ್ದು ಎಲ್ಲೂ ಲೋಪ ಆಗಿಲ್ಲ. 4,701,50 ವಿದ್ಯಾರ್ಥಿಗಳು, 4,01,281 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ ಎಂದು ತಿಳಿಸಿದರು.
ಈ ವರ್ಷ ಶೇ.99.99ಮಂದಿ ಅಂದರೆ 5, 82, 314 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷ 73.70 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ದ್ವಿತೀಯ ಮಧುಗಿರಿ ತೃತೀಯ, ಮಂಡ್ಯ ಜಿಲ್ಲೆಗೆ ನಾಲ್ಕನೇ ಸ್ಥಾನ ಲಭಿಸಿದೆ. ಯಾದಗಿರಿ ಕೊನೆಯ ಸ್ಥಾನ ಲಭಿಸಿದೆ. 2, 28, 734 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ.
ಶೇ 99.09ರಷ್ಟು ದಾಖಲೆ ಫಲಿತಾಂಶ ಬಂದಿದೆ
ಎ + (90-100 ಮಾರ್ಕ್ಸ್) 1, 28, 931 ಮಂದಿ, 16.52%
ಎ ಗ್ರೇಡ್ (80-89 ಮಾರ್ಕ್ಸ್) 2,50,317 ಮಂದಿ, 32.07%
ಬಿ ಗ್ರೇಡ್ (60-79 ಮಾರ್ಕ್ಸ್) 2,87,684 ಮಂದಿ, 13.86%
ಸಿ ಗ್ರೇಡ್ (35-59 ಮಾರ್ಕ್ಸ್) 1,13,610 ಮಂದಿ, 14.55%
ಸಿ ಗ್ರೇಡ್ ಅಂಕಗಳಲ್ಲಿ 9% ಮಂದಿಗೆ ಗ್ರೇಸ್ ಅಂಕ ನೀಡಿ ಪಾಸ್ ನೀಡಲಾಗಿದೆ ಎಂದು ತಿಳಿಸಿದರು.