NEWSನಮ್ಮರಾಜ್ಯರಾಜಕೀಯ

ಮೊಘಲ್‌ ಆಳ್ವಿಕೆಯಲ್ಲಿ ಉನ್ನತ ಸ್ಥಾನ ಹಿಡಿದವರ ಪೀಳಿಗೆಯವರೇ ಈಗಿನ ಆರ್‌ಎಸ್‌ಎಸ್‌ ನಾಯಕರು: ಸಿದ್ದರಾಮಯ್ಯ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊಘಲರ ಆಳ್ವಿಕೆಯಲ್ಲಿ ಅವರ ಆಸ್ಥಾನದಲ್ಲಿ ಉನ್ನತ ಹುದ್ದೆಯಲ್ಲಿದ್ದ ಜನರ ಪೀಳಿಗೆಗೆ ಸೇರಿದವರೇ ಆರ್‌ಎಸ್‌ಎಸ್‌ ನಾಯಕರಾಗಿದ್ದಾರೆ. ಇವರು ನಮಗೆ ಭಾರತೀಯತೆ, ದೇಶ ಭಕ್ತಿಯ ಪಾಠ ಮಾಡುತ್ತಾರೆ’ ಎಂದು ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಆರ್‌ಎಸ್‌ಎಸ್‌ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದರು. ಮೊಘಲ್‌ ಆಳ್ವಿಕೆಯಲ್ಲಿ ಉನ್ನತ ಸ್ಥಾನ ಹಿಡಿದವರ ಪೀಳಿಗೆಯವರೇ ಈಗಿನ ಆರ್‌ಎಸ್‌ಎಸ್‌ ನಾಯಕರು ಎಂದಿದ್ದಾರೆ.

ಟಿಪ್ಪು ಜಯಂತಿ ಆಚರಣೆ ಮಾಡಿದ ಕಾರಣ ಇವರು ನನ್ನ ವಿರುದ್ಧ ಜನರನ್ನು ಎತ್ತಿ ಕಟ್ಟಿದರು. ಟಿಪ್ಪು ದೇಶ ದ್ರೋಹ ಮಾಡಿದ್ದನೆ? ಅವನ ದಿವಾನರಾಗಿದ್ದ ಪೂರ್ಣಯ್ಯ ಹಿಂದುವಲ್ಲವೇ? ಹಣಕಾಸು ಮಂತ್ರಿಯಾಗಿದ್ದ ಕೃಷ್ಣಸ್ವಾಮಿ ಹಿಂದುವಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬ್ರಿಟಿಷರ ವಿರುದ್ಧ ಹೈದರಾಲಿ ಮತ್ತು ಟಿಪ್ಪು ನಾಲ್ಕು ಮಹಾಯುದ್ಧಗಳನ್ನು ಮಾಡಿದ್ದರು. ಬ್ರಿಟಿಷರನ್ನು ದೇಶದಿಂದ ಹೊರ ಹಾಕುವ ಪ್ರಯತ್ನ ಮಾಡಿದ್ದರು. ಇಂತಹ ಟಿಪ್ಪುವಿನ ಜಯಂತಿ ಮಾಡಿದರೆ, ಬಿಜೆಪಿಯವರಿಗೆ ಕೋಪ ಬರುತ್ತದೆ. ಟಿಪ್ಪು ಮೇಲಿರುವ ಕೋಪ ಪೂರ್ಣಯ್ಯನ ಮೇಲೆ ಏಕಿಲ್ಲ ಎಂದೂ ಸಿದ್ದರಾಮಯ್ಯ ಪ್ರಶ್ನಿಸಿದರು. ‘ಈಸ್ಟ್ ಇಂಡಿಯಾ ಕಂಪನಿ ನಮ್ಮ ದೇಶವನ್ನು ಲೂಟಿ ಮಾಡಿತು.

ನಮ್ಮ ದೇಶಕ್ಕೆ ಬರುವ ಮುಂಚೆ ಜಗತ್ತಿನ ಜಿ.ಡಿ.ಪಿಗೆ ಬ್ರಿಟೀಷರ ಕೊಡುಗೆ ಶೇ 2 ಇತ್ತು, ನಮ್ಮ ದೇಶದಿಂದ ಅವರು ಹೊರಹೋಗುವಾಗ ಶೇ 10ಕ್ಕೆ ಹೋಗಿತ್ತು. ನಮ್ಮ ದೇಶ ಹಿಂದೆಯೇ ಸಮೃದ್ಧವಾಗಿತ್ತು.ದೇಶದ ಜಿ.ಡಿ.ಪಿ ಶೇ 23ರಷ್ಟಿತ್ತು, ಬ್ರಿಟಿಷರು ಕೊಳ್ಳೆ ಹೊಡೆದ ಪರಿಣಾಮ ಭಾರತ ಬಡ ದೇಶವಾಯಿತು.

ಇವತ್ತು ಮತ್ತೆ ಭಾರತ ಬಡದೇಶವಾಗುತ್ತಿದ್ದರೆ ಅದಕ್ಕೆ ಕಾರಣ ಬಿಜೆಪಿಗರು ಎಂದು ಹೇಳಿದ್ದಾರೆ.. ಹಿಂದೆ ಬ್ರಿಟಿಷರ ವಿರುದ್ಧ ಮಾಡಿದ ಹೋರಾಟದ ಮಾದರಿಯಲ್ಲೇ ಈಗ ಮತ್ತೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ