CrimeNEWSನಮ್ಮಜಿಲ್ಲೆ

ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಸಾವು ಆರೋಪ: ಗ್ರಾಮಸ್ಥರ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಖಾಸಗಿ ಕ್ಲಿನಿಕ್ ವೈದ್ಯ ಹಾಕಿದ ಇಂಜೆಕ್ಷನ್‍ನಿಂದ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಯುವಕನ ಪೋಷಕರು ಅಂತ್ಯಕ್ರಿಯೆ ನಡೆಸದೇ ಮಂಡ್ಯದ ಮಿಮ್ಸ್ ಆಸ್ಪತ್ರೆಯ ಶವಾಗಾರದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯ ತಾಲೂಕಿನ ಚಂದಗಾಲು ಗ್ರಾಮದ ವಿಜಯ್‍ಕುಮಾರ್‌ ಎಂಬುಮಗ ನಿಶಾಂತ್ (17) ಮೃತ. ಕಳೆದ ಎರಡು ದಿನಗಳ ಹಿಂದೆ ನಿಶಾಂತ್‍ಗೆ ಜ್ವರ ಇದ್ದ ಕಾರಣ ವಿ.ಸಿ. ಫಾಂ ಗೇಟ್ ಬಳಿ ಇರುವ ಖಾಸಗಿ ಕ್ಲಿನಿಕ್‍ಗೆ ಕರೆದುಕೊಂಡು ಹೋದ ವೇಳೆ ವೈದ್ಯ ಸಂತೋಷ್ ಇಂಜೆಕ್ಷನ್ ಕೊಟ್ಟಿದ್ದಾರೆ. ಇದಾದ ಬಳಿಕ ನಿಶಾಂತ್ ಆರೋಗ್ಯದಲ್ಲಿ ಏರುಪೇರು ಆದ ಕಾರಣ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ನಂತರ ಮೈಸೂರಿಗೆ ಕರೆದುಕೊಂಡು ಹೋಗಿ ಎಂದು ಮಿಮ್ಸ್ ಸಿಬ್ಬಂದಿ ಶಿಫಾರಸ್‌ ಮಾಡಿದ್ದಾರೆ. ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಶಾಂತ್ ಸಾವನ್ನಪ್ಪಿದ್ದಾರೆ.

ನಿಶಾಂತ್ ಸಾವಿಗೆ ವಿ.ಸಿ.ಫಾಂ ಗೇಟ್ ಬಳಿಯ ಖಾಸಗಿ ಕ್ಲಿನಿಕ್‍ನ ವೈದ್ಯ ಸಂತೋಷ್ ನೀಡಿದ ಇಂಜೆಕ್ಷನ್ ನಿಂದಲೇ ನಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ವೈದ್ಯ ಸಂತೋಷ್‌ ಅವರನ್ನು ಬಂಧಿಸಿ, ಮೃತ ಯುವಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ಪ್ರಕರಣ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ